Advertisement

ಬ್ಯಾಂಕಾಕ್‌ಗೆ ತೆರಳಿದ ರಾಹುಲ್‌?

10:51 AM Oct 07, 2019 | Team Udayavani |

ಹೊಸದಿಲ್ಲಿ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ವಯನಾಡ್‌ ಸಂಸದ ರಾಹುಲ್‌ ಗಾಂಧಿ ಅವರು ಶನಿವಾರ ರಾತ್ರಿ ಬ್ಯಾಂಕಾಕ್‌ಗೆ ಪ್ರಯಾಣ ಬೆಳೆಸಿದ್ದಾರೆ.

Advertisement

ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭೆಗೆ ಕೆಲವೇ ದಿನ ಬಾಕಿ ಇರುವಾಗಲೇ ಆ ರಾಜ್ಯಗಳಲ್ಲಿ ಪ್ರಮುಖ ನಾಯಕರ ನಡುವಿನ ಭಿನ್ನಮತದ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು ವಿದೇಶಕ್ಕೆ ತೆರಳಿದ್ದಾರೆ ಎಂದು “ರಿಪಬ್ಲಿಕ್‌ ಟಿವಿ’ ವರದಿ ಮಾಡಿದೆ.

ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸಿನ ಪ್ರಮುಖ ನಾಯಕರೇ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದೊಳಗಿನ ಆಂತರಿಕ ಕಚ್ಚಾಟ ಮುಗಿಲು ಮುಟ್ಟಿದೆ. ಶನಿವಾರ ಹರಿಯಾಣ ಕಾಂಗ್ರೆಸ್‌ ಘಟಕದ ಮಾಜಿ ರಾಜ್ಯಾಧ್ಯಕ್ಷ ಅಶೋಕ್‌ ತನ್ವಾರ್‌ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮೊನ್ನೆಯಷ್ಟೇ ಮಹಾರಾಷ್ಟ್ರ ನಾಯಕ ಸಂಜಯ್‌ ನಿರುಪಮ್‌ ಚುನಾವಣ ಪ್ರಚಾರದಿಂದ ದೂರ ಉಳಿಯುವುದಾಗಿ ಘೋಷಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next