ಇದುವರೆಗೆ ಪಕ್ಷದ ನಾಯಕರು ನಿಗದಿತ ತಿಂಗಳ ಹೆಸರನ್ನು ಉಲ್ಲೇಖೀಸುತ್ತಿ ದ್ದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. 1998ರಿಂದ ಸತತವಾಗಿ 19 ವರ್ಷಗಳ ಕಾಲ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆ ಯಲ್ಲಿ ಪದತ್ಯಾಗ ಮಾಡಲು ಮುಂದಾಗಿದ್ದಾರೆ ಎಂದು ದೆಹಲಿ ಮೂಲದ ಇಂಗ್ಲಿಷ್ ಪತ್ರಿಕೆಯೊಂದು ವರದಿ ಮಾಡಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಯುನೈಟೆಡ್ ಪ್ರೊಗ್ರೆಸಿವ್ ಅಲಯನ್ಸ್ (ಯುಪಿಎ) ಅನ್ನು ಸ್ಥಾಪಿಸಿ 15 ಪಕ್ಷಗಳ ಮೈತ್ರಿಯೊಂದಿಗೆ 2004 ಮತ್ತು 2009ರಲ್ಲಿ ಸತತ ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದ ಹೆಗ್ಗಳಿಕೆ ಅವರದ್ದು.
Advertisement
ಇಷ್ಟು ಮಾತ್ರವಲ್ಲ ಬರೋಬ್ಬರಿ 19 ವರ್ಷಗಳ ಕಾಲ ಅಧ್ಯಕ್ಷ ಹುದ್ದೆಯಲ್ಲಿದ್ದ ಅವರು ನಿವೃತ್ತಿ ಹೊಂದಿದ ಬಳಿಕ ಪಕ್ಷದ ಯಾವುದೇ ಹುದ್ದೆ ವಹಿಸದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಕಾಂಗ್ರೆಸ್‌ನ ಸಂಸದೀಯ ಮಂಡಳಿ ಅಧ್ಯಕ್ಷ ರಾಗಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ಹೇಳಿವೆ. ಇತ್ತೀಚೆಗಷ್ಟೇ ಹೈದರಾಬಾದ್‌ನಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ, ಮುಂದಿನ ತಿಂಗಳು ನಡೆಯುವ ಪಕ್ಷದ ಆಂತರಿಕ ಚುನಾವಣೆ ಯಲ್ಲಿ ಅಧ್ಯಕ್ಷರನ್ನಾಗಿ ರಾಹುಲ್ ಗಾಂಧಿಯವರನ್ನು ನೇಮಿಸಲಾಗುತ್ತದೆ ಎಂದು ಹೇಳಿದ್ದರು.