Advertisement
ರಾಹುಲ್ ಗಾಂಧಿ ರಾಜ್ಯ ಪ್ರವಾಸದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕದಲ್ಲಿ ಪ್ರವಾಸ ಮಾಡುವಾಗ ರಾಹುಲ್ ಗಾಂಧಿ ಸಂವಿಧಾನದ ಅನುಚ್ಛೇಧ 371ಜೆ ತಿದ್ದುಪಡಿ ಮಾಡುವ ಕುರಿತು ಆ ಭಾಗದ ಜನರಿಗೆ ಭರವಸೆ ನೀಡಿದ್ದರು. ಅದರಂತೆ ಯುಪಿಎ ಸರ್ಕಾರದ ಅವಧಿಯಲ್ಲಿ 371ಜೆ ತಿದ್ದುಪಡಿ ಮಾಡಿ ಅನುಕೂಲ ಮಾಡಿಕೊಟ್ಟಿದ್ದರು. ರಾಜ್ಯ ಸರ್ಕಾರ ಮಹದಾಯಿ ವಿವಾದ ಬಗೆ ಹರಿಸುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡದೇ ರಾಜ್ಯಕ್ಕೆ ಬಂದಾಗಲೆಲ್ಲ ಸುಳ್ಳು ಹೇಳಿ ಹೋಗುತ್ತಿದ್ದಾರೆ. ಆದರೆ ರಾಹುಲ್‌ಗಾಂಧಿಯವರು ಮುಂಬೈ ಕರ್ನಾಟಕ ಭಾಗದ ಪ್ರವಾಸದಲ್ಲಿ ಮಹದಾಯಿ ವಿವಾದದ ಬಗ್ಗೆ ರಾಹುಲ್‌ಗಾಂಧಿ ಮಾತನಾಡಲಿದ್ದಾರೆ ಎಂದು ಹೇಳಿದರು.
Related Articles
Advertisement
ಯಾರೇ ತಪ್ಪು ಮಾಡಿದರೂ ಕ್ಷಮಿಸಲ್ಲ: ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಲ್ಲೆ ಪ್ರಕರಣದಲ್ಲಿ ಪಕ್ಷ ತಕ್ಷಣವೇ ಕ್ರಮ ಕೈಗೊಂಡಿದ್ದು, ಆತನನ್ನು ಆರು ವರ್ಷ ಪಕ್ಷದಿಂದ ಉಚ್ಚಾಟಿಸಲಾಗಿದೆ. ಅದೇ ರೀತಿ ಕೆ.ಆರ್.ಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ವಿರುದಟಛಿವೂ ಪಕ್ಷ ಕ್ರಮ ಕೈಗೊಂಡಿದೆ. ಸರ್ಕಾರ ಕೂಡ ನಲಪಾಡ್ ವಿರುದ್ಧ ಪ್ರಕರಣ ದಾಖಲಿಸಿದೆ. ಕೋರ್ಟ್ ಆತನನ್ನು ಜೈಲಿಗೆ ಕಳುಹಿಸಿದೆ. ಪಕ್ಷದಲ್ಲಿ ಯಾರೇ ಅಶಿಸ್ತಿನಿಂದ ವರ್ತಿಸಿದರೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪಿಎಫ್ಐ ಸಂಘಟನೆ ನಿಷೇಧ ಮಾಡುವ ಕುರಿತಂತೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಆ ಸಂಸ್ಥೆಯ ಬಗ್ಗೆ ಯಾವ ರೀತಿಯ ವರದಿ ಇದೆ ಎನ್ನುವುದನ್ನು ಸರ್ಕಾರ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದೆ. ಪ್ರಜಾಪ್ರಭುತ್ವದಲ್ಲಿ ಎಲ್ಲ ಸಂಘಟನೆಗಳಿಗೂ ಸ್ವಾತಂತ್ರ್ಯ ಇದೆ ಎಂದು ಪರಮೇಶ್ವರ್ ಹೇಳಿದರು.