Advertisement

ಚಿತ್ರದುರ್ಗ: ಲಿಂಗಧೀಕ್ಷೆ ಪಡೆದ ರಾಹುಲ್ ಗಾಂಧಿ, ಮುರುಘಾ ಮಠದಲ್ಲಿ ಧ್ಯಾನ

12:39 PM Aug 03, 2022 | Team Udayavani |

ಚಿತ್ರದುರ್ಗ: ಮುರುಘಾ ಮಠದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ಮುರುಘಾ ಮಠಕ್ಕೆ ಭೇಟಿ‌ ನೀಡಿದ್ದ ವೇಳೆ ಅವರು ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಲಿಂಗಧೀಕ್ಷೆ ನೀಡಿದ್ದಾರೆ.

Advertisement

ಮಠಕ್ಕೆ ಆಗಮಿಸುತ್ತಲೇ ಕರ್ತೃ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರಿಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಧ್ಯಾನ ಮಾಡಿದರು.

ಲಿಂಗಧೀಕ್ಷೆ ಪಡೆದುಕೊಂಡ ನಂತರ ನಮಗೆ ಲಿಂಗಪೂಜೆ ಇತ್ಯಾದಿಗಳ ಕುರಿತು ತರಬೇತಿ ನೀಡಲು ಯಾರನ್ನಾದರೂ ದೆಹಲಿಗೆ ಕಳುಹಿಸಲು ಕೋರಿಕೆ ಇಟ್ಟರು ಎಂದು ಮೂಲಗಳು ತಿಳಿಸಿವೆ.

ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ರಾಹುಲ್ ಜೊತೆ ಸಂವಾದದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ : ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಧಾನ್ಕರ್ ಗೆ ಬಿಎಸ್ ಪಿ ಬೆಂಬಲ: ಮಾಯಾವತಿ ಘೋಷಣೆ

Advertisement
Advertisement

Udayavani is now on Telegram. Click here to join our channel and stay updated with the latest news.

Next