ಮಾನ್ಸಾ(ಅಮೃತ್ ಸರ್): ಇತ್ತೀಚೆಗೆ ಗುಂಡಿನ ದಾಳಿಯಲ್ಲಿ ಹತ್ಯೆಗೀಡಾಗಿದ್ದ ಪಂಜಾಬ್ ಗಾಯಕ ಸಿಧು ಮೂಸೆವಾಲಾ ಅವರ ನಿವಾಸಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ (ಜೂನ್ 07)ಭೇಟಿ ನೀಡಿದ್ದು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಒಳಜಗಳ ಕಾಂಗ್ರೆಸ್ ಆತ್ಮವಿಶ್ವಾಸ ಕುಗ್ಗಿಸಿದೆ: ನಳಿನ್ ಕಟೀಲ್
ಇಂದು ಬೆಳಗ್ಗೆ ಚಂಡೀಗಢದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ರಾಹುಲ್ ಗಾಂಧಿ ಅವರು ಗಾಯಕ ಮೂಸೆವಾಲಾ ಅವರ ತವರಾದ ಮೂಸಾ ಗ್ರಾಮಕ್ಕೆ ತೆರಳಿದ್ದರು ಎಂದು ಪಿಟಿಐ ವರದಿ ಮಾಡಿದೆ.
ಪಂಜಾಬ್ ಕಾಂಗ್ರೆಸ್ ವರಿಷ್ಠ ಅಮರೀಂದರ್ ಸಿಂಗ್ ರಾಜಾ, ಪಂಜಾಬ್ ವಿಧಾನಸಭೆಯ ವಿಪಕ್ಷ ನಾಯಕ ಪ್ರತಾಪ್ ಸಿಂಂಗ್ ಬಾಜ್ವಾ, ಮಾಜಿ ಉಪ ಮುಖ್ಯಮಂತ್ರಿ ಓಪಿ ಸೋನಿ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿ ಜತೆಗಿದ್ದರು.
ಈ ಘಟನೆ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿದೇಶದಲ್ಲಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ವಿದೇಶದಿಂದ ಎರಡು ದಿನಗಳ ಹಿಂದಷ್ಟೇ ಸ್ವದೇಶಕ್ಕೆ ಆಗಮಿಸಿದ್ದರು.