Advertisement

ರಾಹುಲ್ ಮನವೊಲಿಕೆ ಯತ್ನ

01:23 AM Jul 02, 2019 | mahesh |

ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಅವರ ಮನವೊಲಿಸಲು ಕಾಂಗ್ರೆಸ್‌ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಶತಾಯಗತಾಯ ಯತ್ನಿಸಿದ್ದಾರೆ.

Advertisement

ಸೋಮವಾರ ರಾಹುಲ್ರನ್ನು ಭೇಟಿಯಾದ ಸಿಎಂಗಳು, ನೀವು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬೇಕು ಎಂದು ಒತ್ತಾಯಿಸಿದ್ದು, ತಮ್ಮ ಸಲಹೆಯನ್ನು ರಾಹುಲ್ ಸಕಾರಾತ್ಮಕವಾಗಿ ಸ್ವೀಕರಿಸುತ್ತಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ, ಪಂಜಾಬ್‌, ಮಧ್ಯಪ್ರದೇಶ, ಛತ್ತೀಸ್‌ಗಡ ಮತ್ತು ಪುದುಚೇರಿ ಮುಖ್ಯಮಂತ್ರಿಗಳು ರಾಹುಲ್ ಜತೆ ಮಾತುಕತೆ ನಡೆಸಿದ್ದು, ಲೋಕಸಭೆ ಚುನಾವಣೆಯ ಸೋಲಿನ ಪರಾಮರ್ಶೆಯನ್ನೂ ನಡೆಸಿದ್ದಾರೆ. 2 ಗಂಟೆಗಳ ಕಾಲ ಚರ್ಚೆ ನಡೆದಿದ್ದು, ದೇಶದ ಎಲ್ಲ ಕಾಂಗ್ರೆಸ್‌ ಕಾರ್ಯಕರ್ತರೂ ನೀವೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬೇಕೆಂದು ಬಯಸುತ್ತಿದ್ದಾರೆ. ಹಾಗಾಗಿ, ದಯವಿಟ್ಟು ಅವರ ಮನಸ್ಸನ್ನು ನೋಯಿಸದಿರಿ ಎಂದು ಕೇಳಿಕೊಂಡಿದ್ದೇವೆ ಎಂದು ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್ ತಿಳಿಸಿದ್ದಾರೆ.

ಇದೇ ವೇಳೆ, ಈ ನಾಯಕರು ಪಕ್ಷದ ಸೋಲಿನ ಹೊಣೆಯನ್ನೂ ನಾವೇ ಹೊರುವುದಾಗಿಯೂ ರಾಹುಲ್ಗೆ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next