ಗಾಂಧಿ ಹೇಳಿಕೆ ಬೌದ್ಧಿಕ ದಿವಾಳಿತನದ್ದು ಎಂದು ಕಿಡಿ ಕಾರಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಜಾತ್ಯತೀತ ಪಕ್ಷವಲ್ಲ ಎನ್ನುತ್ತಿರುವ ರಾಹುಲ್ ಗಾಂಧಿ ಅವರು ಮೊದಲು ಕಾಂಗ್ರೆಸ್ ಜಾತ್ಯತೀತ ಪಕ್ಷವೇ ಎಂಬುದನ್ನು ಪ್ರಶ್ನಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
Advertisement
ಜೆಡಿಎಸ್ ಜಾತ್ಯತೀತ ಪಕ್ಷ ಅಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬೆಂಬಲದೊಂದಿಗೆ ಅಧಿಕಾರ ಹಿಡಿದವರಿಂದ ನೈತಿಕತೆ ಹೆಸರಿನಲ್ಲಿ ರಾಜೀನಾಮೆ ಕೊಡಿಸಿ. ಬಿಬಿಎಂಪಿಯಲ್ಲಿ ಜೆಡಿಎಸ್ ಜತೆಗಿನ ಮೈತ್ರಿ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸಿ. ಜೆಡಿಎಸ್ ಬೆಂಬಲದೊಂದಿಗೆ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಿ ಎಂದು ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ.
Related Articles
Advertisement
ನೀವು ನಂಬಿದ್ದ ಡೋಂಗಿ ಜಾತ್ಯತೀತವಾದ ನಿಮಗೆ ಪಾಠ ಕಲಿಸುತ್ತಿದ್ದಂತೆ ಇಂದು ದೇಗುಲ, ಮಠ ಮಂದಿರಗಳಿಗೆ ಹೋಗುತ್ತಿದ್ದೀರಿ. ಮುಂದೊಂದು ದಿನ ಈ ಕಪಟ ನಡವಳಿಕೆಗಳಿಗೂ ಜನ ಉತ್ತರ ಕೊಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೀರಶೈವ ಲಿಂಗಾಯತರನ್ನು ಒಡೆದು ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಸವಣ್ಣರ ಹೆಸರನ್ನು, ಬಸವತತ್ವವನ್ನು ದುರ್ಬಳಕೆ ಮಾಡಿಕೊಂಡ ನಿಮ್ಮಂಥ ಪಕ್ಷದವರಿಂದ ಬುದ್ಧಿ ಹೇಳಿಸಿಕೊಳ್ಳವಷ್ಟು ದಾರಿದ್ರÂ ಜೆಡಿಎಸ್‌ಗೆ ಬಂದಿಲ್ಲ. ದೇಶದಲ್ಲಿ ನಿಮ್ಮನ್ನು ಜನ ಮುಳುಗಿಸುತ್ತಿದ್ದಾರೆ. ರಾಜ್ಯದಲ್ಲಿ ತೇಲಿಕೊಂಡಿದ್ದೀರಾದರೂ ಮುಂದೆ ಇಲ್ಲಿಯೂ ಮುಳುಗಿ ಅಸ್ತಂಗತರಾಗುತ್ತೀರಿ ಎಂದು ಎಚ್ಚರಿಸಿದ್ದಾರೆ.