Advertisement

Raichur: ಖಾಸಗಿ ಆಸ್ಪತ್ರೆ ವೈದ್ಯನನ್ನು ಗುರಿಯಾಗಿರಿಸಿ ಗುಂಡಿನ ದಾಳಿ

06:01 PM Aug 31, 2023 | Team Udayavani |

ರಾಯಚೂರು: ಇಲ್ಲಿನ ಖಾಸಗಿ ಆಸ್ಪತ್ರೆಯ ವೈದ್ಯರಾದ ಡಾ.ಜಯಪ್ರಕಾಶ ಪಾಟೀಲ್ ಬೆಟ್ಟದೂರು ಅವರ ಮೇಲೆ ಗುಂಡಿನ‌ ದಾಳಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಗುರುವಾರ ಮಧ್ಯಾಹ್ನ 2.30ಕ್ಕೆ ರಾಯಚೂರಿನಿಂದ ಮಾನವಿಗೆ ಹೋಗುವಾಗ ಸಾಥ ಮೈಲ್ ಕ್ರಾಸ್ ಹತ್ತಿರ‌ ಕಾರಿನ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಗುಂಡಿನ‌ ದಾಳಿ ಮಾಡಿದ್ದಾರೆ. ಆದರೆ, ಗುರಿ ತಪ್ಪಿದ್ದು, ಕಾರಿನ ಬಾನಟ್ ಗೆ ಗುಂಡು ತಗುಲಿದ್ದು, ವೈದ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next