ರಾಯಚೂರು: ಸಾರಿಗೆ ನೌಕರರ ಮುಷ್ಕರದಿಂದಾಗಿ ಸ್ಥಗಿತಗೊಂಡಿದ್ದ ಬಸ್ ಸಂಚಾರವನ್ನು ಜಿಲ್ಲಾಡಳಿತ ಎಸ್ಕಾರ್ಟ್ ಭದ್ರತೆಯಲ್ಲಿ ಆರಂಭಿಸಿತು. ಪ್ರತಿ ಬಸ್ ಗಳನ್ನು ಪೊಲೀಸ್ ಭದ್ರತೆಯಲ್ಲಿಯೇ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಬೆಳಗ್ಗೆಯಿಂದ ಈವರೆಗೂ 35ಕ್ಕೂ ಅಧಿಕ ಬಸ್ ಗಳನ್ನು ಓಡಿಸಿದ್ದು , ಪ್ರತಿ ಬಸ್ ಗೂ ಒಬ್ಬ ಪೇದೆಯನ್ನು ನಿಯೋಜಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಾಗಿ ಕಂಡು ಬಂತು. ಈ ನಿಟ್ಟಿನಲ್ಲಿ ನಗರ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಡಿಸಿ ಆರ್.ವೆಂಕಟೇಶ ಕುಮಾರ್ ಪರಿಸ್ಥಿತಿ ಅವಲೋಕಿಸಿದರು.
ಈ ವೇಳೆ ಮಾತನಾಡಿದ ಅವರು, ಸರ್ಕಾರದ ಸೂಚನೆ ಮೇರೆಗೆ ಭದ್ರತೆಯಲ್ಲಿ ಬಸ್ ಸಂಚಾರ ಆರಂಭಿಸಲಾಗಿದೆ. ಅಂತರ ಜಿಲ್ಲೆ ಮಾತ್ರವಲ್ಲದೆ ಬೇರೆ ಭಾಗಗಳಿಗೂ, ಬೇರೆ ಜಿಲ್ಲೆಗಳಿಗೂ ಬಸ್ ಸಂಚಾರ ಆರಂಭಿಸಲಾಗಿದೆ. ಬೇಡಿಕೆ ಹೆಚ್ಚಾಗಿದ್ದು , ಇನ್ನೂ ಹೆಚ್ಚಿನ ಬಸ್ ಓಡಿಸಲು ಸೂಚಿಸಲಾಗಿದೆ. ಕೆಲವೆಡೆ ಬಸ್ ಗಳಿಗೆ ಕಲ್ಲು ತೂರಾಟ ಮಾಡಿರುವುದು ಗಮನಕ್ಕೆ ಬಂದಿದ್ದು ಅಂತಹ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ. ತಿಳಿಸಿದರು.
ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್ ಎರಡು ತಲೆ ಹಾವು; ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ: ಈಶ್ವರಪ್ಪ