Advertisement

Raichur; ಖಾಸಗಿ ಬಸ್ – ಇನ್ನೋವಾ ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

12:58 PM Feb 18, 2024 | Team Udayavani |

ರಾಯಚೂರು: ತಾಲೂಕಿನ ಕಸಬೆ ಕ್ಯಾಂಪ್ ಬಳಿ ಖಾಸಗಿ ಬಸ್ ಮತ್ತು ಇನ್ನೋವಾ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ‌ ಶನಿವಾರ ತಡರಾತ್ರಿ ಸಂಭವಿಸಿದೆ.

Advertisement

ಗದಗದಿಂದ ರಾಯಚೂರಿಗೆ ಬರುತ್ತಿದ್ದ ಇನ್ನೋವಾ ಕಾರು ಹಾಗೂ ಹೈದರಾಬಾದ್ ನಿಂದ ಸಿಂಧನೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ.

ಇನ್ನೋವಾ ಕಾರಿನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಮೃತಪಟ್ಟಿದ್ದಾರೆ.

ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದು, ಉಳಿದ ಐವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next