Advertisement

ರಾಯಚೂರು: ಒಂದೇ ಕುಟುಂಬ ಮೂವರ ಹತ್ಯೆಗೈದಿದ್ದ ಪ್ರಮುಖ ಆರೋಪಿ ಬಂಧನ

12:59 PM Oct 02, 2021 | Team Udayavani |

ರಾಯಚೂರು: ಸಮೀಪದ ಯರಮರಸ್ ಕ್ಯಾಂಪ್ ನಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಖಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದು ಪ್ರಮುಖ ಆರೋಪಿ ಸಾಯಿ ಅಲಿಯಾಸ್ ಸೌರಭ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಮಂಗಳವಾರ ರಾತ್ರಿ ಸೌರಭ್ ಸೇರಿ ಇನ್ನಿಬ್ಬರು ಆರೋಪಿಗಳು ಸೇರಿ ಕೊಲೆ ನಡೆಸಿದ್ದರು. ಪ್ರಕರಣದ ಬೆನ್ನತ್ತಿದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಕ್ಷುಲಕ ಕಾರಣಕ್ಕೆ ಬಸ್ ಕಂಡಕ್ಟರ್, ಆಟೋ ಚಾಲಕರ ನಡುವೆ ಮಾತಿನ ಚಕಮಕಿ,ಹಲ್ಲೆ

ಆರೋಪಿ ಸೌರಭ್ ಸಾಕಷ್ಟು ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವುದು ತನಿಖೆ ವೇಳೆ ಗೊತ್ತಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಡಿವೈಎಸ್ಪಿ ಶಿವನಗೌಡ ಪಾಟೀಲ್ ಸಿಪಿಐ ಹನುಮರೆಡ್ಡಿ ನೇತೃತ್ವದ ತಂಡ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next