Advertisement

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

08:07 PM May 07, 2024 | Team Udayavani |

ಸಿರವಾರ: ತಾಲೂಕಿನ ಜಾಗೀರ ಜಾಡಲದಿನ್ನಿ ಗ್ರಾಮದ ಮತಗಟ್ಟೆಯಲ್ಲಿ ಬಿಎಲ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ (58) ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Advertisement

ಮೃತ ಬಸವರಾಜ ಸಿರವಾರ ತಾಲ್ಲೂಕಿನ ಅತ್ತನೂರು ಗ್ರಾಮದವರೆಂದು ತಿಳಿದು ಬಂದಿದೆ. ಏಕಾಏಕಿ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮತಗಟ್ಟೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.

ಕೊಂಚ ಚೇತರಿಸಿಕೊಂಡ ಅವರನ್ನು ಸಿರವಾರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿಗೆ ಕರೆದುಯ್ಯುವ ರಸ್ತೆ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಸಹಾಯಕ ಚುನಾವಣೆ ಅಧಿಕಾರಿ ಚೇತನ ಕುಮಾರ ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next