Advertisement

ನಾಳೆಯಿಂದ ಫುಲ್ ಲಾಕ್ ಡೌನ್: ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

01:15 PM May 15, 2021 | Team Udayavani |

ರಾಯಚೂರು: ಜಿಲ್ಲೆಯಲ್ಲಿ ಮೇ 16ರಿಂದ 18ರ ವರೆಗೆ ಪೂರ್ಣ ಪ್ರಮಾಣದ ಲಾಕ್ ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಎಣ್ಣೆ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿವೆ.

Advertisement

ಈ ಮೊದಲು ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಜತೆಗೆ ಮದ್ಯ ಖರೀದಿಗೂ ವಿನಾಯಿತಿ ನೀಡಲಾಗಿತ್ತು. ಆದರೆ, ಮೂರು ದಿನ ಸಂಪೂರ್ಣ ಬಂದ್ ಇರುವ ಕಾರಣ ಮೂರು ದಿನಕ್ಕಾಗುವಷ್ಟು ಸರಕು ಸಂಗ್ರಹಿಸಿಕೊಳ್ಳಲು ಗ್ರಾಹಕರು ಸರದಿಯಲ್ಲಿ ನಿಂತು ಖರೀದಿಸಿದರು.

ಎಂಎಸ್ ಐಎಲ್ ಸೇರಿದಂತೆ ಬಹುತೇಕ ಬಾರ್ ಮತ್ತು ವೈನ್ ಶಾಪ್ ಗಳ ಮುಂದೆ ಜನಸಂದಣಿ ಜೋರಾಗಿತ್ತು. ಮದ್ಯ ಖರೀದಿಗೂ ಅಬಕಾರಿ ಇಲಾಖೆ ಮಿತಿ ನಿಗದಿಗೊಳಿಸಿದೆ. ಸರತಿ ಸಾಲಿನಲ್ಲಿ ನಿಂತು ಖರೀದಿಸಿದರೂ ಸಾಮಾಜಿಕ ಅಂತರ ಕಂಡು ಬರಲಿಲ್ಲ.

ಇದನ್ನೂ ಓದಿ : ಗವಿಮಠ ಕೋವಿಡ್ ಆಸ್ಪತ್ರೆಗೆ ಸಚಿವ ಬಿ ಸಿ ಪಾಟೀಲ ಭೇಟಿ

ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಸಾವಿರಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. ಸೋಂಕು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಭಾನುವಾರ, ಸೋಮವಾರ, ಮಂಗಳವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಅವಧಿಯಲ್ಲಿ ಆಸ್ಪತ್ರೆಗಳು, ಮೆಡಿಕಲ್ ಶಾಪ್ ಗಳು, ಪೆಟ್ರೋಲ್ ಬಂಕ್ ಗಳನ್ನು ಹೊರತುಪಡಿಸಿ ಇತರೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿರುವುದಿಲ್ಲ. ಮೇ 19ರ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next