Advertisement

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

04:25 PM Jun 21, 2024 | Team Udayavani |

ರಾಯಚೂರು: ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಮುನ್ನೂರು ಕಾಪು ಸಮಾಜದಿಂದ ಆಯೋಜಿಸಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬಕ್ಕೆ ವೈದ್ಯಕೀಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಚಾಲನೆ ನೀಡಿದರು.

Advertisement

ಮೊದಲ ದಿನದ ಎತ್ತುಗಳಿಂದ ಒಂದೂವರೆ ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಂಗಾರು ಹಬ್ಬವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸುವ ಮೂಲಕ ರಾಜ್ಯದಲ್ಲಿ ಗಮನ ಸೆಳೆದ ಮುನ್ನೂರು ಕಾಪು ಸಮಾಜದ ಕಾರ್ಯ ಶ್ಲಾಘನೀಯ. ಈ ಹಬ್ಬ ರಾಜ್ಯದಲ್ಲಿ ಮಾದರಿಯಾಗಿದೆ. ಭಾರತ ಕೃಷಿ ಪ್ರಧಾನ ದೇಶ. ಮುನ್ನೂರು ಕಾಪು ಸಮಾಜ ಕಳೆದ 24 ವರ್ಷಗಳಿಂದ ಈ ಹಬ್ಬವನ್ನು ಆಯೋಜಿಸುತ್ತಿರುವುದು ಸಂತೋಷದ ಸಂಗತಿ ಎಂದರು.

ಶಾಸಕ ಶಿವರಾಜ ಪಾಟೀಲ್ ಮಾತನಾಡಿ, ಮುನ್ನೂರು ಕಾಪು ಯಾರ ನೆರವು ಪಡೆಯದೆ ಕಳೆದ 24 ವರ್ಷದದಿಂದ ಅತ್ಯಂತ ಅದ್ದೂರಿಯಾಗಿ ಈ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದೆ. ಈ ರೀತಿ ಹಬ್ಬಗಳನ್ನು ಬೇರೆ ಯಾವ ಜಿಲ್ಲೆಗಳಲ್ಲಿ ಕೂಡ ಜರುಗುವುದಿಲ್ಲ. ಸರ್ಕಾರದಿಂದ ಒಂದು ರೂ. ಕೂಡ ಪಡೆಯದೆ ಕೇವಲ ಸಮಾಜದಿಂದ ಇಷ್ಟೊಂದು ಅದ್ದೂರಿಯಾಗಿ ಮಾಡುತ್ತಿರುವುದು ಸಾಮಾನ್ಯದ ವಿಷಯವಲ್ಲ ಎಂದರು.

ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಈ ಹಬ್ಬವನ್ನು ಸರ್ಕಾರದಿಂದ ಆಯೋಜಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಒತ್ತಾಯಿಸಿದರು. ಬಿಚ್ಚಾಲಿಯ ಶ್ರೀ ವೀರಭದ್ರ ಶಿವಾಚಾರ್ಯರು, ಸೋಮವಾರಪೇಟೆ ಹಿರೇಮಠದ ಶ್ರೀ ಅಭಿನವ ರಾಚೋಟಿ ವೀರ ಶಿವಾಚಾರ್ಯರು, ಸುಲ್ತಾನಪುರದ ಶ್ರೀ ಶಂಭು ಸೋಮನಾಥ ಶಿವಾಚಾರ್ಯರು, ಎಂಎಲ್ ಸಿ ಎ.ವಸಂತಕುಮಾರ, ಮುಖಂಡರಾದ ಎ.ಪಾಪಾರೆಡ್ಡಿ, ಬೆಲ್ಲಂ ನರಸರೆಡ್ಡಿ, ಕಾಂಗ್ರೆಸ್‌  ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ ಸೇರಿ ಸಾವಿರಾರು ಜನ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next