ಕಾಲೇಜುಗಳ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ವೇತನಾನುದಾನ
ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ
ಖಾಸಗಿ ಅನುದಾನ ರಹಿತ ಶಾಲೆ-ಕಾಲೇಜು ಆಡಳಿತ ಮಂಡಳಿಗಳ
ಒಕ್ಕೂಟದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ
ನಡೆಸಲಾಯಿತು.
Advertisement
ನಗರ ಸೇರಿ ಜಿಲ್ಲಾದ್ಯಂತ ಮಂಗಳವಾರ ಖಾಸಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿದ ಒಕ್ಕೂಟದ ಪದಾಧಿಕಾರಿಗಳು, ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಧರಣಿ ನಡೆಸಿ ಡಿಸಿಗೆ ಮನವಿ ಸಲ್ಲಿಸಿದರು.
Related Articles
Advertisement
ಅನುದಾನ ರಹಿತ ಶಾಲಾ ಕಾಲೇಜು ಆಡಳಿತ ಮಂಡಳಿ ಅಧೀನದಲ್ಲಿರುವ ಕೃಷಿ ಜಮೀನನ್ನು 109ರ ಅಡಿ ಶುಲ್ಕ ರಹಿತ ಕಂದಾಯ ಜಮೀನನ್ನಾಗಿ ಮಾಡಿ ಆಡಳಿತ ಮಂಡಳಿಗೆ ವರ್ಗಾಯಿಸಬೇಕು. ವೇತನಾನುದಾನ ನೀಡುವವರೆಗೆ ತಾತ್ಕಾಲಿಕವಾಗಿ ಸರ್ಕಾರಿ ಶಾಲೆಯಲ್ಲಿ ಈಗಾಗಲೇ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6,500 ರೂ. ಮತ್ತು ಪ್ರೌಢಶಾಲಾ ಶಿಕ್ಷಕರಿಗೆ 12,500 ರೂ. ನೀಡುತ್ತಿದ್ದು ಅದರಂತೆ ಅನುದಾನ ರಹಿತ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ವೇತನ ಪಾವತಿಸಬೇಕೆಂಬ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಪದಾಧಿಕಾರಿಗಳಾದ ರವಿಕುಮಾರ, ರಾಜಾ ಶ್ರೀನಿವಾಸ, ಶಂಕರಲಿಂಗಯ್ಯ, ನರಸಪ್ಪ, ಗಿರೀಶ ಆಚಾರಿ, ಶೇಖ ಮೆಹಬೂಬ್, ಮಹಾಂತೇಶ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.