Advertisement

ಅಧಿಕಾರಿಗಳ ಜತೆ ಚರ್ಚಿಸಿ ನೀರಿನ ಸಮಸ್ಯೆ ನೀಗಿಸಿ

06:13 PM Mar 20, 2020 | Naveen |

ರಾಯಚೂರು: ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಎದುರಾದರೂ ಸಂಬಂಧಪಟ್ಟ ಅಧಿಕಾರಿಗಳು ಆಯಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜತೆ ಚರ್ಚಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ ನಿರ್ದೇಶನ ನೀಡಿದರು.

Advertisement

ನಗರದ ಜಿಪಂ ಜಲ ನಿರ್ಮಲ ಸಭಾಂಗಣದಲ್ಲಿ ಗುರುವಾರ ನಡೆದ ಕುಡಿಯುವ ನೀರಿನ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಬೇಕು. ಆ ದಿಸೆಯಲ್ಲಿ ಸಮಸ್ಯಾತ್ಮಕ ಹಳ್ಳಿಗಳನ್ನು ಗುರುತಿಸಬೇಕು. ಅಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡರೆ ತಾಪಂ ಇಒಗಳ ಜತೆ ಸಂಬಂಧಿಸಿದ ಅಧಿಕಾರಿಗಳು ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದರು.

ಕುಡಿವ ನೀರಿನ ಯೋಜನೆಗೆ ಅನುದಾನ ನೀಡಿ ಎರಡು ತಿಂಗಳಾದರೂ ನೀಡಿದ ಅನುದಾನ ಸಮರ್ಪಕವಾಗಿ ಬಳಸದ ಲಿಂಗಸುಗೂರು ವಿಭಾಗದ ಅಧಿಕಾರಿಗೆ ಶೋಕಾಸ್‌ ನೋಟಿಸ್‌ ನೀಡುವುದಾಗಿ ತಿಳಿಸಿದರು.

ಲಿಂಗಸುಗೂರು ತಾಲೂಕಿನಲ್ಲಿ ಐದು ಕಡೆ ಕುಡಿವ ನೀರಿನ ಕಾಮಗಾರಿ ಮಂಜೂರಾಗಿವೆ. ಗುರುಗುಂಟಾ, ಸಂತೆಕಲ್ಲೂರು ಸೇರಿ ವಿವಿಧೆಡೆ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ದೂರಿದರು. ದೇವದುರ್ಗ, ಸಿಂಧನೂರು ತಾಲೂಕುಗಳಲ್ಲಿ ಕೈಗೊಂಡಿರುವ ಕೆರೆ ಕಾಮಗಾರಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಜಿಪಂ ಸಿಇಒ ಮಾಹಿತಿ ಪಡೆದರು. ಕುಡಿವ ನೀರಿನ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next