Advertisement
ಗುರುವಾರದಿಂದ ಶುರುವಾದ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಪರೀಕ್ಷೆಗೆ ಮಕ್ಕಳನ್ನು ಬಿಡಲು ಬಂದ ಪಾಲಕ, ಪೋಷಕರಿಂದಲೇ ಸಾಮಾಜಿಕ ಅಂತರ ಮರೆಯಾಗಿತ್ತು. ಜಿಲ್ಲೆಯ 77 ಮುಖ್ಯ ಆರು ಉಪಕೇಂದ್ರ ಸೇರಿ 83 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಭಾಷೆ ಕನ್ನಡ ಮತ್ತು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟಾರೆ 27,544 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರ ಪೈಕಿ 26,137 ವಿದ್ಯಾರ್ಥಿಗಳು ಹಾಜರಾಗಿದ್ದು, 1407 ವಿದ್ಯಾರ್ಥಿಗಳು ಗೈರಾಗಿದ್ದರು.
Related Articles
Advertisement
ಟ್ಯಾಗೋರ್ ಪ.ಪೂ. ಕಾಲೇಜಿನ ಪರೀಕ್ಷಾ ಕೇಂದ್ರದ ಮುಂಭಾಗದಲ್ಲಿ ಜಿಲ್ಲಾಧಿಕಾರಿಗಳೆ ಖುದ್ದು ಥರ್ಮಲ್ ಸ್ಕ್ರೀನಿಂಗ್ ಮಷಿನ್ ಹಿಡಿದು ಪರೀಕ್ಷಿಸಿದರು. ನಂತರ ಎಲ್ಲ ಪರೀಕ್ಷಾ ಕೊಠಡಿಗಳನ್ನು ಪರೀಶಿಲಿಸಿದರು. ಅನುಮಾನ ವ್ಯಕ್ತವಾದ ವಿದ್ಯಾರ್ಥಿಗಳ ಉತ್ತರ ಹಾಗೂ ಪ್ರಶ್ನೆ ಪತ್ರಿಕೆ ಮತ್ತು ಹಾಲ್ ಟಿಕೆಟ್‌ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಸಿಸಿ ಕ್ಯಾಮೆರಾ ಕೊಠಡಿಗೆ ತೆರಳಿ ದೃಶ್ಯಗಳನ್ನು ವೀಕ್ಷಿಸಿದರು.
ಸೇವೆಯಿಂದ ಬಿಡುಗಡೆ: ಪೊಲೀಸ್ ಕಾಲೊನಿಯ ಸರ್ಕಾರಿ ಉರ್ದು, ಕನ್ನಡ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೆಂಕಟೇಶಕುಮಾರ, ಪರೀಕ್ಷಾ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಕೇಂದ್ರದಿಂದ ಹೊರಗೆ ಕಳುಹಿಸಿದರು. ಕೆಲವು ನಕಲು ಚೀಟಿ ಹಾಗೂ ಡೈಜಿಸ್ಟ್ ಗಳು ಬಿದ್ದಿರುವುದು ಕಂಡುಬಂತು. ಕೂಡಲೇ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಮೇಲ್ವಿಚಾರಕರನ್ನು ತರಾಟೆಗೆ ತೆಗೆದುಕೊಂಡರು. ಕೊಠಡಿ ಮೇಲ್ವಿಚಾರಕಿ ಶೀಲಾರನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಸೂಚಿಸಿದರು. ಅವರ ವಿರುದ್ಧ ವರದಿ ನೀಡುವಂತೆ ಬಿಇಒಗೆ ಸೂಚಿಸಿದರು.