Advertisement

Raichur: ಪ್ರೀತಿ ನಿರಾಕರಿಸಿದಕ್ಕಾಗಿ ಯುವಕ ಆತ್ಮಹತ್ಯೆ

12:47 PM Jun 15, 2024 | Team Udayavani |

ರಾಯಚೂರು: ಯುವತಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವಕನೊಬ್ಬ ವಿಷ ಸೇವೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ಜರುಗಿದೆ.

Advertisement

ತಾಲೂಕಿನ ಗಧಾರ್ ಗ್ರಾಮದ ಹನುಮೇಶ (21) ಯುವಕ ನಗರದ ನವಯುಗ ಕಾಲೇಜಿನಲ್ಲಿ ಅಂತಿಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಾ ನಗರದ ಸರ್ಕಾರಿ ವಸತಿ ನಿಲಯದಲ್ಲಿದ್ದ. ಕಳೆದ ಎರಡು ವರ್ಷದಿಂದ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಹಾಗೂ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಈ ಕುರಿತಂತೆ ಯುವತಿಯ ಮನೆಯವರು ಕೂಡ ಮೊದಲು ಒಪ್ಪಿದ್ದಿಲ್ಲ. ವಿದ್ಯಾಭ್ಯಾಸ ಮುಗಿದ ನಂತರ ಮದುವೆ ಮಾಡುವುದಾಗಿ ತಿಳಿಸಿದ್ದರು.

ಆದರೆ ಕಳೆದ ರಾತ್ರಿ ನೇರವಾಗಿ ವಸತಿ ನಿಲಯದಿಂದಲೇ ಅರಣ್ಯ ಪ್ರದೇಶಕ್ಕೆ ತೆರಳಿದ್ದ ಹನುಮೇಶ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next