Advertisement

ಎಸ್ಸೆಸ್ಸೆಲಿ ಫಲಿತಾಂಶ ಸುಧಾರಣೆ ಮುಖ್ಯ ಶಿಕ್ಷಕರ ಹೊಣೆ

05:48 PM Sep 25, 2019 | Naveen |

ರಾಯಚೂರು: ಜಿಲ್ಲೆಯಲ್ಲಿ ಎಸ್ಸೆಸ್ಸಲ್ಸಿ ಫಲಿತಾಂಶ ಸುಧಾರಣೆಗೆ ಹಲವು ಅಂಶಗಳ ಕಾರ್ಯಕ್ರಮ ರೂಪಿಸಿದ್ದು, ಎಲ್ಲ ಶಾಲೆಗಳ ಮುಖ್ಯಶಿಕ್ಷಕರು ಅವುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಪಂ ಸಿಇಒ ಲಕ್ಷ್ಮೀ ಕಾಂತ ರೆಡ್ಡಿ ಹೇಳಿದರು.

Advertisement

ಎಸ್ಸೆಸ್ಸೆಲ್ಸಿ ಗುಣಾತ್ಮಕ ಫಲಿತಾಂಶ ಸುಧಾರಣೆಗೆ ನಗರದ ಜಿಪಂ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕಳೆದ ವರ್ಷದ ಫಲಿತಾಂಶ ಗಮನಿಸಿದರೆ ನಾಚಿಕೆಪಡುವಂತಿದೆ. ಮೊದಲೇ ಜಿಲ್ಲೆ ಸಾಕಷ್ಟು ಹಿಂದುಳಿದಿದ್ದು, ಇಂಥ ಫಲಿತಾಂಶ ಜಿಲ್ಲೆಯ ಸುಧಾರಣೆಗೆ ಪೂರಕವಲ್ಲ. ಶಿಕ್ಷಣದಿಂದ ಮಾತ್ರ ಜಿಲ್ಲೆಯ ಅಭಿವೃದ್ಧಿ ಸಾಧ್ಯ. ಆದರೆ, ಶಿಕ್ಷಣದಲ್ಲೇ ಹಿಂದುಳಿದರೆ ಬೇರೆ ಕ್ಷೇತ್ರಗಳ ಪ್ರಗತಿ ಹೇಗೆ ಸಾಧ್ಯವಾಗಲಿದೆ ಎಂದು ಪ್ರಶ್ನಿಸಿದರು.

ಈ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಜಿಲ್ಲೆಯನ್ನು ಟಾಪ್‌ 10 ಪಟ್ಟಿಯಲ್ಲಿ ಬರುವಂತೆ ಮಾಡುವ ಹೊಣೆ ಎಲ್ಲ ಮುಖ್ಯಶಿಕ್ಷಕರ ಮೇಲಿದೆ. ಈ ಬಾರಿ ಫಲಿತಾಂಶ ಸುಧಾರಣೆಗೆ ಹಲವು ಕ್ರಮ ಕೈಗೊಂಡಿದ್ದು, ಹಲವು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ. ಶೇ.50ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳನ್ನು ಗುರುತಿಸಿದ್ದು, ಆ ಶಾಲೆಗಳಿಗೆ ಹೆಚ್ಚು ಒತ್ತು ನೀಡಬೇಕಿದೆ. ಕಳೆದ 10 ವರ್ಷಗಳ ಪ್ರಶ್ನೆ ಪತ್ರಿಕೆಗಳ ಪುಸ್ತಕ ತಯಾರಿಸಿ ಆಯಾ ಶಾಲೆಗಳಿಗೆ ನೀಡಲಾಗುವುದು. ಮುಖ್ಯವಾಗಿ ಇಂಗ್ಲಿಷ್‌, ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ವಿಷಯಗಳಿಗೆ ಆದ್ಯತೆ ನೀಡಬೇಕಿದೆ. ಫಲಿತಾಂಶ ಸುಧಾರಣೆಗೆ ಹಲವು ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಪ್ರತ್ಯೇಕ ಸಮಿತಿ ರಚಿಸಿದ್ದು, ಅದಕ್ಕೆ ಜಿಪಂ ಸಿಇಒ ಅಧ್ಯಕ್ಷರಾದರೆ, ಇಲಾಖೆ ಅಧಿಕಾರಿಗಳು, ಮುಖ್ಯಶಿಕ್ಷಕರು ಸದಸ್ಯರಾಗಿರುತ್ತಾರೆ. ಈ ಕಾರ್ಯಕ್ರಮದ ಜವಾಬ್ದಾರಿಯನ್ನು ಪ್ರೊಬೇಷ°ರಿ ಐಎಎಸ್‌ ಅಧಿಕಾರಿ ಯತೀಶಕುಮಾರ ಅವರಿಗೆ ನೀಡಲಾಗಿದೆ ಎಂದರು.

ಮಕ್ಕಳ ಕಲಿಕಾ ಮಟ್ಟಪರಿಶೀಲಿಸಿ ನ್ಯೂನತೆ ಹೊಂದಿದ ಮಕ್ಕಳ ಸಾಮರ್ಥಯ ವೃದ್ಧಿಸಬೆಕು. ಕನಿಷ್ಠ ಪಾಸ್‌ ಆಗುವಂತೆ ನೋಡಿಕೊಳ್ಳಿ. ಮಕ್ಕಳು ಉತ್ತಮ ಅಂಕ ಗಳಿಸಲು ಶಾಲೆಯ ಫಲಿತಾಂಶ ಸುಧಾರಣೆಗೆ ಈ ಕಾರ್ಯಕ್ರಮ ಪೂರಕವಾಗಿದೆ. ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ಹುದ್ದೆಗಳ ಖಾಲಿ ಇರುವುದು ಗಮನಕ್ಕಿದ್ದು, ಎಚ್‌ಕೆಆರ್‌ಡಿಬಿಯಡಿ ನೇಮಕಾತಿಗೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.ಫಲಿತಾಂಶ ಸುಧಾರಣೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಕುರಿತು ಡಿಡಿಪಿಐ ಬಿ.ಕೆ.ನಂದನೂರು ವಿವರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next