Advertisement
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮದಲ್ಲಿ (ಇವಿಪಿ) ಅವರು ಮಾತನಾಡಿದರು. ಮತದಾರರ ಗುರುತಿನ ಚೀಟಿಯಲ್ಲಿ ಎಲ್ಲ ಅಂಶಗಳು ಸ್ಪಷ್ಟವಿದ್ದರೂ ಮತದಾರರು ಎಪಿಕ್ ಕಾರ್ಡ್ ಪರಿಶೀಲಿಸುವುದು ಸೂಕ್ತ ಹಾಗೂ ಅದನ್ನು ದಾಖಲಿಸಬೇಕು. ಸರ್ಕಾರಿ ಅಧಿಕಾರಿಗಳು ತಮ್ಮ ಎಪಿಕ್ ಕಾರ್ಡ್ ಪರಿಶೀಲಿಸಿಕೊಳ್ಳಬೇಕು. ನಂತರ ನಿಮ್ಮ ಕುಟುಂಬ ಸದಸ್ಯರ ಕಾರ್ಡ್‌ಗಳನ್ನು ಪರಿಶೀಲಿಸಿ ಎಂದು ಸೂಚಿಸಿದರು.
ಮತದಾರರು. ಹೀಗಾಗಿ ಶಾಲೆಗಳಲ್ಲೂ ಮಾಹಿತಿ ನೀಡಬೇಕು. ಅದೇ ರೀತಿ ರಿಮ್ಸ್, ಕೃಷಿ ವಿವಿಗಳಲ್ಲೂ ಈ ಕಾರ್ಯ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ಬೃಹತ್ ಜಾಥಾ ನಡೆಸಬೇಕು ಎಂದು ತಿಳಿಸಿದರು. ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಸಹಾಯಕ ಆಯುಕ್ತರಾದ ಸಂತೋಷ ಕುಮಾರ, ರಾಜಶೇಖರ ಡಂಬಳ ಸೇರಿ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.