Advertisement

ಬಸವೇಶ್ವರರ ಜಯಂತಿ ಸರಳ ಆಚರಣೆ

12:20 PM Apr 27, 2020 | Naveen |

ರಾಯಚೂರು: ಕೋವಿಡ್ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್‌ ಡೌನ್‌ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಹಾ ಮಾನವತಾವಾದಿ, ಜಗಜ್ಯೋತಿ ಬಸವೇಶ್ವರರ 887ನೇ ಜಯಂತಿಯನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ರವಿವಾರ ಸರಳವಾಗಿ ಆಚರಿಸಲಾಯಿತು.

Advertisement

ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಪ್ರತಿಮೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ವಿವಿಧ ಸಮಾಜಗಳ ಪ್ರತಿನಿಧಿಗಳು ಗೌರವ ಸಲ್ಲಿಸಿದರು.

ಚಿಕ್ಕಸುಗೂರು ಚೌಕಿಮಠದ ಡಾ|ಸಿದ್ಧಲಿಂಗ ಸ್ವಾಮೀಜಿ, ಕಿಲ್ಲೇಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರು, ಸೋಮವಾರ ಪೇಟೆ ಹಿರೇಮಠದ ಶ್ರೀ ಅಭಿನವ ರಾಚೋಟಿ ವೀರಶಿವಾಚಾರ್ಯರು, ಶಾಸಕರಾದ ಡಾ| ಶಿವರಾಜ ಪಾಟೀಲ, ಬಸವನಗೌಡ ದದ್ದಲ್‌, ಎಂಎಲ್‌ಸಿ ಎನ್‌.ಎಸ್‌. ಬೋಸರಾಜ್‌, ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಎಡಿಸಿ ದುರುಗೇಶ, ಎಸಿ ಸಂತೋಷ ಕಾಮಗೌಡ, ತಹಶೀಲ್ದಾರ್‌ ಡಾ| ಹಂಪಣ್ಣ, ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ವೀರನಗೌಡ ಪಾಲ್ಗೊಂಡಿದ್ದರು. ನಗರದ ಬಸವ ಕೇಂದ್ರದಲ್ಲೂ ಬಸವ ಜಯಂತಿ ಆಚರಿಸಲಾಯಿತು. ವೃತ್ತದ ಬಳಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತುಗಳನ್ನು ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next