Advertisement

ನಿನ್ನೆ ಎರಡು ಕೋವಿಡ್ ಪಾಸಿಟಿವ್‌

03:18 PM Jun 22, 2020 | Naveen |

ರಾಯಚೂರು: ಜಿಲ್ಲೆಯಲ್ಲಿ ರವಿವಾರ ಎರಡು ಕೋವಿಡ್ ಪಾಸಿಟಿವ್‌ ಪ್ರಕರಣ ದೃಢಪಟ್ಟಿವೆ. ಮಹಾರಾಷ್ಟ್ರದಿಂದ ಮರಳಿದ ದೇವದುರ್ಗ ತಾಲೂಕಿನ ಗುಂಡಗುರ್ತಿಯ 42 ವರ್ಷದ ಮಹಿಳೆ, ಆಲ್ಕೋಡ್‌ ಗ್ರಾಮದ 28 ವರ್ಷ ಪುರುಷನಿಗೆ ಸೋಂಕು ದೃಢಪಟ್ಟಿದೆ.

Advertisement

ರವಿವಾರ ದೇವದುರ್ಗ ತಾಲೂಕಿನಿಂದ 34, ಲಿಂಗಸುಗೂರು 126, ಮಾನ್ವಿ 15, ಸಿಂಧನೂರು 25 ಮತ್ತು ರಾಯಚೂರು ತಾಲೂಕಿನಿಂದ 83 ಸೇರಿದಂತೆ 283 ಜನರ ಗಂಟಲಿನ ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಿದ ವರದಿಗಳಲ್ಲಿ 465 ನೆಗೆಟಿವ್‌ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಈವರೆಗೆ 20,013 ಮಾದರಿ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 18,759 ನೆಗೆಟಿವ್‌ ಆಗಿವೆ. ಉಳಿದ 817 ಮಾದರಿಗಳ ಫಲಿತಾಂಶ ಬರಬೇಕಿದೆ.

ಫಿವರ್‌ ಕ್ಲಿನಿಕ್‌ಗಳಲ್ಲಿಂದು 367 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಈವರೆಗೆ 431 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಪೈಕಿ 272 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ವಿವಿಧ ಸರ್ಕಾರಿ ಕ್ವಾರಂಟೈನ್‌ ಕೇಂದ್ರಗಳಲ್ಲಿ 180 ಜನರನ್ನು ಉಳಿಸಲಾಗಿದೆ ಎಂದು ಡಿಸಿ ಆರ್‌.ವೆಂಕಟೇಶ ಕುಮಾರ ತಿಳಿಸಿದ್ದಾರೆ.

ಪೊಲೀಸರಿಗೆ ಸ್ವಾಗತ: ಕೋವಿಡ್‌-19 ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಹಾಜರಾದ ನಗರದ ಪಶ್ಚಿಮ ಠಾಣೆಯ ನಾಲ್ವರು ಪೇದೆಗಳಿಗೆ ಹೂಮಾಲೆ ಹಾಕಿ ಸ್ವಾಗತಿಸಲಾಯಿತು. ಸೋಂಕು ತಗುಲಿದ ಹಿನ್ನೆಲೆಯಲ್ಲಿ ನಗರದ ಒಪೆಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ನಾಲ್ವರು ಇದೀಗ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next