Advertisement

ನಿನ್ನೆ ಮತ್ತೆ 6 ಮಂದಿಗೆ ಕೋವಿಡ್ ಸೋಂಕು

11:53 AM Jul 04, 2020 | Naveen |

ರಾಯಚೂರು: ಜಿಲ್ಲೆಯಲ್ಲಿ ಶುಕ್ರವಾರ 6 ಜನರಲ್ಲಿ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 517ಕ್ಕೆ ಏರಿದೆ.

Advertisement

404 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನೂ 113 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ ದೇವದುರ್ಗ ತಾಲೂಕಿನಿಂದ 77, ಲಿಂಗಸುಗೂರು-44, ಮಾನ್ವಿ-113, ಸಿಂಧನೂರು-89 ಮತ್ತು ರಾಯಚೂರು ತಾಲೂಕಿನಿಂದ 52 ಸೇರಿದಂತೆ ಒಟ್ಟು 375 ಜನರ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಿದ ವರದಿಗಳಲ್ಲಿ 358 ನೆಗೆಟಿವ್‌ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಈವರೆಗೆ 24,445 ಜನರ ಗಂಟಲು ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅವುಗಳಲ್ಲಿ 22,364 ವರದಿಗಳು ನೆಗೆಟಿವ್‌ ಆಗಿವೆ. ಉಳಿದ 1,558 ಸ್ಯಾಂಪಲ್‌ಗ‌ಳ ಫಲಿತಾಂಶ ಬರಬೇಕಿದೆ.

ಫೀವರ್‌ ಕ್ಲಿನಿಕ್‌ಗಳಲ್ಲಿಂದು 624 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಒಟ್ಟು 175 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next