Advertisement

ಮಲೇರಿಯಾ ರೋಗ ನಿಯಂತ್ರಣಕ್ಕೆ ಜಾಗೃತಿ ಮೂಡಿಸಲು ವೈದ್ಯರ ಸಲಹೆ

06:22 PM Jun 20, 2020 | Naveen |

ರಾಯಚೂರು: ಮಲೇರಿಯಾ ರೋಗ ನಿಯಂತ್ರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಅದನ್ನು ನಿರ್ಮೂಲನ ಮಾಡುವಂತೆ ತಾಲೂಕು ಆರೋಗ್ಯ ಅಧಿಕಾರಿ ಡಾ| ಮಹ್ಮದ್‌ ಶಾಕೀರ್‌ ಮೊಯಿದ್ಧೀನ್‌ ಕರೆ ನೀಡಿದರು.

Advertisement

ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಅನಾಫೆಲಿಸ್‌ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ. 2025 ರೊಳಗಾಗಿ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಪಣತೊಟ್ಟಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕಾರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಮಲೇರಿಯಾ ತಾಂತ್ರಿಕ ಮೇಲ್ವಿಚಾರಕಿ ಸಂಧ್ಯಾ ಮಾತನಾಡಿ, ಮೊದಲಿಗೆ ಜ್ವರ, ಮೈ ಕೈನೋವು, ವಾಂತಿ, ವಿಪರೀತವಾದ ತಲೆನೋವು, ಬಿಟ್ಟು ಬಿಟ್ಟು ಜ್ವರ ಬರುವುದು ಇವು ಮುಖ್ಯವಾಗಿ ಮಲೇರಿಯಾ ರೋಗದ ಲಕ್ಷಣಗಳಾಗಿವೆ. ಸಾರ್ವಜನಿಕರು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮನೆ ಸುತ್ತ ಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ನಿಂತ ನೀರನ್ನು ಸರಾಗವಾಗಿ ಹರಡುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.  ಜಿಲ್ಲಾ ತಾಲೂಕು ಮೇಲ್ವಿಚಾರಕ ರಂಗರಾವ್‌ ಕುಲಕರ್ಣಿ, ಆಶಾ ಮೇಲ್ವಿಚಾರಕಿ ಮರಿಯಾಳಮ್ಮ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಪುರುಷ ಮತ್ತು ಮಹಿಳಾ ಆರೋಗ್ಯ ಸಹಾಯಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next