Advertisement

ಪ್ರವಾಹ ಪೀಡಿತರಿಗೆ ಶೀಘ್ರ ಪರಿಹಾರ ಕೊಡಿ

12:58 PM Aug 18, 2019 | Team Udayavani |

ರಾಯಚೂರು: ಕೃಷ್ಣಾ ನದಿ ಪ್ರವಾಹ ಪೀಡಿತರಿಗೆ ಆದಷ್ಟು ಬೇಗನೆ ಪರಿಹಾರ ವಿತರಿಸಲು ಕ್ರಮ ಜರುಗಿಸಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ ಅಖ್ತರ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರವಾಹದಿಂದ ಜನರು ಮನೆ, ಆಸ್ತಿ ಹಾಗೂ ಬೆಳೆ ಕಳೆದುಕೊಂಡಿದ್ದಾರೆ. ಅವರಿಗೆ ಅಗತ್ಯ ಪರಿಹಾರ ನೀಡಿ ನೆರವಾಗಬೇಕು ಎಂದರು.

ಜಿಲ್ಲಾಧಿಕಾರಿ ಶರತ್‌ ಬಿ. ಮಾತನಾಡಿ, ಪ್ರವಾಹ ರಕ್ಷಣಾ ಕಾರ್ಯದಲ್ಲಿ ಭಾರತೀಯ ಸೇನೆಯ 102 ಜನ. ಎನ್‌ಡಿಆರ್‌ಎಫ್‌ 45 ಸಿಬ್ಬಂದಿ ಹಾಗೂ ಒಂದು ಸೇನಾ ಹೆಲಿಕಾಪ್ಟರ್‌ ಮತ್ತು ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಪ್ರವಾಹ ಸಂದರ್ಭದಲ್ಲಿ ಅವರು ನಿರ್ವಹಿಸುತ್ತಿರುವ ಕಾರ್ಯಗಳನ್ನು ವಿವರಿಸಿದರು ಹಾಗೂ ಜಿಲ್ಲೆಯಲ್ಲಿ ದೇವದುರ್ಗ ತಾಲೂಕಿನಲ್ಲಿ ಹೆಚ್ಚು ಹಾನಿ ಆಗಿರುವ ಕುರಿತು ಕಾರ್ಯದರ್ಶಿಗಳ ಗಮನಕ್ಕೆ ತಂದರು. ಕೃಷಿ ಇಲಾಖೆ. ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.

ಜಿಪಂ ಸಿಇಒ ಲಕ್ಷಿ ್ಮೕಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

1.52 ಕೋಟಿ ರೂ. ತೋಟಗಾರಿಕೆ ಬೆಳೆ ಹಾನಿ: ಕೃಷ್ಣಾ ಮತ್ತು ತುಂಗಭದ್ರಾ ನದಿ ಪಾತ್ರದಲ್ಲಿ ಉಂಟಾದ ನೆರೆ ಪ್ರವಾಹದಿಂದ ಜಿಲ್ಲೆಯಲ್ಲಿ 1.52 ಕೋಟಿ ರೂ. ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹ್ಮದ್‌ ಅಲಿ ತಿಳಿಸಿದ್ದಾರೆ.

Advertisement

ಲಿಂಗಸುಗೂರು, ದೇವದುರ್ಗ, ಮಾನ್ವಿ ಮತ್ತು ರಾಯಚೂರು ತಾಲೂಕುಗಳಲ್ಲಿ ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ಮೆಣಸಿನಕಾಯಿ, ಬಾಳೆ, ಈರುಳ್ಳಿ ಬೆಳೆಗಳು ಜಲಾವೃತ್ತದಿಂದ ನಾಶವಾಗಿವೆ. ಮುಖ್ಯವಾಗಿ ಲಿಂಗಸುಗೂರು ಮತ್ತು ದೇವದುರ್ಗ ತಾಲೂಕುಗಳಲ್ಲಿ ಅತೀವ ಬೆಳೆಹಾನಿ ಆಗಿದೆ. ಲಿಂಗಸುಗೂರು ತಾಲೂಕಿನಲ್ಲಿ ದಾಳಿಂಬೆ ಬೆಳೆ 107 ಹೆಕ್ಟೇರ್‌, ದೇವದುರ್ಗ ತಾಲೂಕಿನಲ್ಲಿ ಮೆಣಸಿನಕಾಯಿ 104 ಹೆಕ್ಟೇರ್‌, ರಾಯಚೂರು ತಾಲೂಕಿನಲ್ಲಿ ಈರುಳ್ಳಿ ಮತ್ತು ಬಾಳೆ 8 ಹೆಕ್ಟೇರ್‌ ಮತ್ತು ತುಂಗಭದ್ರಾ ನೀರಿನ ಪ್ರವಾಹದಿಂದ ಮಾನ್ವಿ ತಾಲೂಕಿನಲ್ಲಿ 22 ಹೆಕ್ಟೇರ್‌ ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 241 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದೆ. ತೋಟಗಾರಿಕೆ ಇಲಾಖೆಯ ಕ್ಷೇತ್ರ ಸಿಬ್ಬಂದಿ, ತಾಲೂಕು ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಉಪ ನಿರ್ದೇಶಕರು ಹಾನಿಗೊಳಗಾದ ರೈತರ ಕ್ಷೇತ್ರಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next