Advertisement
ಬಳಿಕ ಮಾತನಾಡಿದ ಸಂಸದ ನಾಯಕ, ಇದೊಂದು ರೈತರ ಹಬ್ಬ. ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುನ್ನೂರು ಕಾಪು ಸಮಾಜ ಇಂಥದ್ದೊಂದು ವಿನೂತನ ಕಾರ್ಯಕ್ರಮ ಆಚರಿಸಿಕೊಂಡು ಬರುತ್ತಿರುವುದು ನಿಜಕ್ಕೂ ಉತ್ತಮ ಕಾರ್ಯ. ಆಧುನಿಕ ಯುಗದಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಸೂಕ್ತ ಪ್ರೋತ್ಸಾಹ ಸಿಗದೇ ನಶಿಸುತ್ತಿವೆ. ಮುನ್ನೂರು ಕಾಪು ಸಮಾಜ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿರುವುದು ಶ್ಲಾಘನೀಯ ಎಂದರು.
Related Articles
Advertisement
ಸೋಮವಾರಪೇಟೆ ಹಿರೇಮಠದ ಅಭಿನವ ಶ್ರೀ ರಾಚೋಟಿ ವೀರ ಶಿವಾಚಾರ್ಯ ಸ್ವಾಮೀಜಿ, ಭೃಂಗಿಮಠದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಆಚರಣೆ ಸಮಿತಿ ಅಧ್ಯಕ್ಷ ಎ.ಪಾಪಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮುಖಂಡ ಎನ್.ಶಂಕ್ರಪ್ಪ ಮಾತನಾಡಿದರು. ಮುನ್ನೂರು ಕಾಪು ಸಮಾಜ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಮುಖಂಡರಾದ ಆರ್.ತಿಮ್ಮಯ್ಯ, ದೊಡ್ಡ ಮಲ್ಲೇಶ, ಎನ್. ಶ್ರೀನಿವಾಸರೆಡ್ಡಿ, ರಾಳ್ಳ ತಿಮ್ಮಾರೆಡ್ಡಿ, ಪುಂಡ್ಲ ನರಸರೆಡ್ಡಿ, ಜಿ.ಶೇಖರರೆಡ್ಡಿ, ಭಂಗಿ ನರಸರೆಡ್ಡಿ, ಪಿ.ಚಂದ್ರಶೇಖರ ರೆಡ್ಡಿ, ಎಸ್.ವೆಂಕಟೇಶ ರೆಡ್ಡಿ, ಗೂಡ್ಸಿ ನರಸರೆಡ್ಡಿ, ಜಿ.ವೆಂಕಟರೆಡ್ಡಿ, ಟಿ.ಮಲ್ಲೇಶ, ಕೃಷ್ಣರೆಡ್ಡಿ ಸೇರಿದಂತೆ ಅನೇಕ ಗಣ್ಯರು ಇದ್ದರು. ವಿವಿಧ ಭಾಗಗಳಿಂದ ಆಗಮಿಸಿದ ರೈತರು ಸ್ಪರ್ಧೆ ನೋಡಿ ಖುಷಿ ಪಟ್ಟರು.
ಮುನ್ನೂರು ಕಾಪು ಸಮಾಜದಿಂದ ಕಳೆದ 19 ವರ್ಷಗಳಿಂದ ನಡೆಸಿಕೊಂಡು ಬಂದ ಈ ಆಚರಣೆಯನ್ನು ಈ ವರ್ಷ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಆಯೋಜಿಸಲಾಗಿದೆ.