Advertisement

ವಸತಿ ನಿಲಯಗಳಲ್ಲಿ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಿ

04:16 PM Jan 15, 2020 | Naveen |

ರಾಯಚೂರು: ಜಿಲ್ಲೆಯಲ್ಲಿ ಸಾಕಷ್ಟು ವಸತಿ ನಿಲಯಗಳು ನಾನಾ ಸಮಸ್ಯೆಗಳಿಂದ ಬಳಲುತ್ತಿವೆ. ಕನಿಷ್ಠ ಸೌಲಭ್ಯಗಳಿಲ್ಲದೇ ಮಕ್ಕಳು ಕಲಿಯುವ ಪರಿಸ್ಥಿತಿ ಬಂದೊದಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಸದಸ್ಯೆ ಡಾ| ಜಯಶ್ರೀ ಚನ್ನಾಳ ಬೇಸರ ವ್ಯಕ್ತಪಡಿಸಿದರು.

Advertisement

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅರ್ಹ ವಿದ್ಯಾರ್ಥಿಗಳು ಬಿಟ್ಟು ಹೊರಗಿನ ವಿದ್ಯಾರ್ಥಿಗಳು
ನುಸುಳುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡಿ
ವ್ಯವಸ್ಥೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಬಿಸಿಎಂ ಹಾಸ್ಟೇಲ್‌ ಅಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಧಿಕಾರಿ ಸಭೆಗೆ ಗೈರಾಗಿದ್ದರು. ಇದರಿಂದ ಅಸಮಾಧಾನ ವ್ಯಕ್ತಪಡಿಸಿದ ಸದಸ್ಯೆ, ಜ.21ರಂದು ನಡೆಯುವ ಸಭೆಗೆ ಹಾಜರಾಗದಿದ್ದಲ್ಲಿ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೇ ಸಾಕಷ್ಟು ಅವ್ಯವಸ್ಥೆಯಿಂದ
ಕೂಡಿದೆ ಎಂಬ ದೂರುಗಳಿವೆ. ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸಿಗಬೇಕು. ಮಕ್ಕಳಿಗೆ ಸರಿಯಾಗಿ ಹಾಲು, ಮೊಟ್ಟೆ ಸಿಗುತ್ತಿಲ್ಲ. ಇದು ಕೂಡ ಅಪೌಷ್ಟಿಕತೆಗೆ ಕಾರಣವಾಗುತ್ತಿದೆ. ಮಾತೃಶ್ರೀ, ಮಾತೃವಂದನಾ ಯೋಜನೆಯ ಸೌಲಭ್ಯ ಗರ್ಭಿಣಿಯರಿಗೆ ತಲುಪಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಬಾಲಪರಾಧ ಪ್ರಕರಣ ತಡೆಗಟ್ಟಲು ಎಲ್ಲ ಇಲಾಖೆಗಳ ಅಧಿ
ಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಈಚೆಗೆ ಬಾಲಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಜನರಲ್ಲಿ ಇನ್ನೂ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ಬಗ್ಗೆ ಯಾವ ರೀತಿಯಾಗಿ ಕ್ರಮ ಕೈಗೊಂಡಿದ್ದೀರಾ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಾಲಕಾರ್ಮಿಕ ಜಿಲ್ಲಾ ಯೋಜನಾ ಧಿಕಾರಿ ಮಂಜುನಾಥ ರೆಡ್ಡಿ, ಪ್ರತಿ ತಿಂಗಳು 5ರಿಂದ 6 ದಿನ ದಾಳಿ ಮಾಡುತ್ತಿದ್ದು, 5 ಪ್ರಕರಣಗಳು ದಾಖಲಾಗಿವೆ. 26 ವಾಹನಗಳನ್ನು ಜಪ್ತಿ ಮಾಡಲಾಗಿದೆ.

Advertisement

ಸಿರವಾರ, ದೇವದುರ್ಗ, ಯರಗೇರಾ ಹಾಗೂ ಮಟಮಾರಿಯಲ್ಲಿ ಹೆಚ್ಚಿನ ಮಕ್ಕಳು ಶಾಲೆಗೆ ತೆರಳದೆ ಹೊಲಕ್ಕೆ ಹತ್ತಿ ಬಿಡಿಸಲು ಹೋಗುತ್ತಿದ್ದಾರೆ. ದಾಳಿ ಮಾಡಿ ಕೆಲವು ಮಕ್ಕಳನ್ನು ರಕ್ಷಿಸಲಾಗಿದೆ. 11 ಇಲಾಖೆ ಅಧಿಕಾರಿಗಳ ಜತೆ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್‌ ಸಮಿತಿ ರಚಿಸಲಾಗಿದೆ. ಬಾಲಾಪರಾಧ,
ಬಾಲ್ಯವಿವಾಹ, ಬಾಲಕಾರ್ಮಿಕ ಬಗ್ಗೆ ಶಾಲೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕರಪತ್ರ, ಬ್ಯಾನರ್‌, ಗೋಡೆ ಬರಹಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ
1098 ಅಳವಡಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದರು.

ಎಸ್ಪಿ ಡಾ| ಸಿ.ಬಿ.ವೇದಮೂರ್ತಿ ಮಾತನಾಡಿ, ಯಾವುದೇ ಅಪರಾಧ ಪ್ರಕರಣಗಳಿರಲಿ ಗಮನಕ್ಕೆ ತಂದಲ್ಲಿ ನಿಯಂತ್ರಣಕ್ಕೆ ಸಿದ್ಧ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಮಕ್ಕಳ ಸಹಾಯವಾಣಿ ಕೇಂದ್ರದ ಸಂಯೋಜನಾಧಿ ಕಾರಿ ಸುದರ್ಶನ, ಜಿಲ್ಲಾ
ಮಕ್ಕಳ ರಕ್ಷಣಾ ಘಟಕದ ಸಂಯೋಜನಾಅಧಿಕಾರಿ ಗುರುಪ್ರಸಾದ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next