Advertisement

ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

01:32 PM Jul 21, 2019 | Naveen |

ರಾಯಚೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಉತ್ತರಪ್ರದೇಶದ ಬಿಜೆಪಿ ಸರ್ಕಾರ ಬಂಧಿಸಿದ್ದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರುಗಳು, ಕಾರ್ಯಕರ್ತರು ಶನಿವಾರ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಭೂ ಕಲಹಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಗುಂಡಿನ ದಾಳಿಗೆ ಒಳಗಾಗಿ 10 ಜನ ಮೃತಪಟ್ಟಿದ್ದಾರೆ. ಪ್ರಾಣತೆತ್ತ ಬುಡಕಟ್ಟು ಸಮುದಾಯದ ಹತ್ತು ಮಂದಿಯ ಕುಟುಂಬದವರನ್ನು ಭೇಟಿ ಮಾಡಲು ಸೋನ್‌ಭದ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಹೊರಟಾಗ ಉತ್ತರಪ್ರದೇಶದ ಪೊಲೀಸರು ಬಂಧಿಸಿರುವುದು ಖಂಡನೀಯ. ಸಂತ್ರಸ್ತರಿಗೆ ಸಾಂತ್ವನ ಹೇಳುವುದು ಜನಪ್ರತಿನಿಧಿಗಳ ಕರ್ತವ್ಯ. ಇದಕ್ಕೆ ಅಡ್ಡಿಪಡಿಸುವ ಮೂಲಕ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ಅವಮಾನ ಮಾಡಿದೆ. ಅಧಿಕಾರ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಸಂವಿಧಾನ ಚೌಕಟ್ಟು ಮೀರಿ ವರ್ತಿಸುತ್ತಿದೆ ಎಂದು ತೀವ್ರ ವಾಗ್ಧಾಳಿ ನಡೆಸಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಾಮಣ್ಣ ಇರಬಗೇರಾ, ನಗರಸಭೆ ಸದಸ್ಯ ಜಯಣ್ಣ, ಸಾಜೀದ ಸಮೀರ, ಮುಖಂಡರಾದ ಕೆ.ಶಾಂತಪ್ಪ, ಅಸ್ಲಂಪಾಷಾ, ತಾಯಣ್ಣ ನಾಯಕ, ಜಿ.ಶಿವಮೂರ್ತಿ, ತಿಮ್ಮಪ್ಪ, ಅಬ್ದುಲ್ ಕರೀಂ, ಅಮರೇಗೌಡ ಹಂಚಿನಾಳ, ಮಲ್ಲೇಶ, ಮಹಿಳಾ ಘಟಕದ ನಿರ್ಮಲಾ ಬೆಣ್ಣಿ, ಶಶಿಕಲಾ ಭೀಮರಾಯ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next