Advertisement
ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ ಜೂನ್‌ನಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದು ತಮ್ಮ ಸಮಸ್ಯೆ ವಿವರಿಸಿದ್ದರು. ಅಲ್ಲದೇ 2018ರ ಸೆ.15ರಂದು ಪಿಎಂ ಟ್ವಿಟರ್ ಖಾತೆಗೆ ಸಮಸ್ಯೆ ಬರೆದು ಟ್ಯಾಗ್ ಮಾಡಿದ್ದರು. ಅದರ ಪ್ರತಿಫಲವಾಗಿ 2018ರ ಅ.1ರಂದು ರೂರಲ್ ಎಲೆಕ್ಟ್ರಿಕಲ್ ಕಾರ್ಪೊರೇಶನ್ ಲಿಮಿಟೆಡ್ ವತಿಯಿಂದ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಮರೇಶಗೆ ಉತ್ತರ ಬಂತು. ಕೇಂದ್ರ ಸರ್ಕಾರದ ಸೌಭಾಗ್ಯ ಯೋಜನೆಯಡಿ ಆಯ್ದ ದೊಡ್ಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿರುವ ವಿಷಯವನ್ನು ಪತ್ರದಲ್ಲಿ ಉಲ್ಲೇಖೀಸಲಾಗಿತ್ತು.
Related Articles
ಪ್ರಧಾನಿ ಯವರು ಚಿಕ್ಕ, ಚಿಕ್ಕ ಸಮಸ್ಯೆಗಳಿಗೂ
ಸ್ಪಂದಿಸುತ್ತಿ ರುವು ದರಿಂದಲೇ ಜನ ಮತ್ತೂಮ್ಮೆ ಅಧಿಕಾರ ನೀಡಿದ್ದಾರೆ.
●ಅಮರೇಶ ಗುಡುಗುಂಟಾ,
ಪಿಎಂಒಗೆ ಪತ್ರ ಬರೆದ ಯುವಕ
Advertisement
ಅನೇಕ ದೊಡ್ಡಿಗಳಿಗೆ ತೆರಳಿ ಶುಲ್ಕ ಪಾವತಿಸಿದರೆ ವಿದ್ಯುತ್ ನೀಡುವುದಾಗಿ ನಾವು ಈ ಮೊದಲೂ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಆದರೆ, ಜನರು ಶುಲ್ಕ ಕಟ್ಟಲು ಮುಂದಾಗುತ್ತಿರಲಿಲ್ಲ. ಸೌಭಾಗ್ಯ ಯೋಜನೆಯಡಿ ವಿದ್ಯುತ್ ನೀಡುವಂತೆ ನಮಗೆ ನಿರ್ದೇಶನ ಬಂದ ಕಾರಣ ಆ ಮೂರುದೊಡ್ಡಿಗಳ ಜತೆ ಇನ್ನೂ ಅನೇಕ ಕಡೆ ವಿದ್ಯುತ್ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ವಿದ್ಯುತ್ ಸರಬರಾಜು ಆರಂಭಿಸಲಾಗುವುದು.
●ಬೆನ್ನಪ್ಪ ಕಂಬಂಟನಾಳ,
ಎಇಇ, ಜೆಸ್ಕಾಂ ಲಿಂಗಸುಗೂರು ವಿಭಾಗ ಪದವೀಧರನ ಜಾಣ್ಮೆ
ತಮ್ಮ ದೊಡ್ಡಿಗಳಲ್ಲಿ ಉನ್ನತ ವ್ಯಾಸಂಗಕ್ಕೆ ಅವಕಾಶ ಇಲ್ಲದ ಕಾರಣ ಮಾವನ ಮನೆಯಲ್ಲಿದ್ದು ಓದಿದ ಅಮರೇಶ, ಎಂಟೆಕ್ ಪದವಿ ಪಡೆದಿದ್ದಾರೆ. ಬಳಿಕ ಮುಂಬೈನಲ್ಲಿ ಕೆಲ ಕಾಲ ಉದ್ಯೋಗ ಮಾಡಿ ಈಗ ಪುನಃ ಊರು ಸೇರಿಕೊಂಡಿದ್ದಾರೆ. ಸ್ಥಳೀಯ ಮಟ್ಟದಲ್ಲಿ ತಮ್ಮ ದೊಡ್ಡಿಗಳ ಸಮಸ್ಯೆ ನೀಗದ ಕಾರಣ ಪ್ರಧಾನಿ ಕಚೇರಿಯ ಮೊರೆ ಹೋಗಿದ್ದಾರೆ. ಅವರ ಸಣ್ಣ ನಡೆ ಈಗ ದೊಡ್ಡಮಟ್ಟದ ಪ್ರತಿಫಲವನ್ನೇ ನೀಡಿದೆ.