Advertisement

ಎಪಿಎಂಸಿಗೆ ಉಸ್ತುವಾರಿ ಕಾರ್ಯದರ್ಶಿ ಭೇಟಿ

04:10 PM Apr 17, 2020 | Naveen |

ರಾಯಚೂರು: ಕೃಷಿ ಉತ್ಪನ್ನ ಮಾರುಕಟ್ಟೆಗೆ ರೈತರು ತರುವ ಉತ್ಪನ್ನಗಳ ಮಾರಾಟಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ, ಪರಸ್ಪರ ಅಂತರ ಕಾಯ್ದುಕೊಂಡು ಖರೀದಿ ಪ್ರಕ್ರಿಯೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್‌.ಎಸ್‌.ಪ್ರಸನ್ನಕುಮಾರ್‌ ಸೂಚಿಸಿದರು.

Advertisement

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಎಪಿಎಂಸಿ ಯಾರ್ಡ್ನಲ್ಲಿ ಖಾಲಿ ಇರುವ ಸ್ಥಳಗಳಲ್ಲಿ ಸ್ಯಾನಿಟೈಸರ್‌, ರಾಸಾಯನಿಕಗಳನ್ನು ಸಿಂಪಡಿಸಬೇಕು. ಆ ವೇಳೆ ಆಹಾರ ಪದಾರ್ಥಗಳ ಮೇಲೆ ಯಾವುದೇ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಪ್ರತಿದಿನ ಭತ್ತ, ಶೇಂಗಾ, ಈರುಳ್ಳಿ ಸೇರಿದಂತೆ ತರಕಾರಿ, ಹಣ್ಣುಗಳ ಮಾರಾಟ ನಡೆಯಬೇಕು. ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಖರೀದಿಸಬೇಕು. ಈಗಾಗಲೇ ಭತ್ತ, ತೊಗರಿ, ಕಡಲೆ, ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ವರ್ತಕರು, ರೈತರ ಹೆಸರಿನಲ್ಲಿ ಮಾರುವುದಕ್ಕೆ ಕಡಿವಾಣ ಹಾಕಬೇಕು ಎಂದು ಸೂಚಿಸಿದರು.

ಈ ವೇಳೆ ಎಸ್‌ಪಿ ಡಾ| ಸಿ.ಬಿ. ವೇದಮುರ್ತಿ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಎಪಿಎಂಸಿ ಕಾರ್ಯದರ್ಶಿ ರಂಗನಾಥ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next