Advertisement

11ರಿಂದ ಪಿಯು ಪೂರಕ ಪರೀಕ್ಷೆ

10:46 AM Jun 09, 2019 | Naveen |

ರಾಯಚೂರು: ದ್ವಿತೀಯ ಪಿಯು ಪೂರಕ ಪರೀಕ್ಷೆ ಜಿಲ್ಲಾದ್ಯಂತ ಜೂನ್‌ 11ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಅಧೀಕ್ಷಕರು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಟಿ.ಕಲ್ಲಯ್ಯ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರದ ಅಧೀಕ್ಷಕರು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮುಖಪುಟಗಳನ್ನು ಪರೀಕ್ಷಿಸಬೇಕು. ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ಪ್ರತಿ ವಾಹನಗಳಿಗೂ ಜಿಪಿಎಸ್‌ ಅಳವಡಿಸಬೇಕು. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಹಾಗೂ ಯಾವುದೇ ತರಹದ ಇಲೆಕ್ಟ್ರಾನಿಕ್‌ ವಸ್ತುಗಳನ್ನು ತರದಂತೆ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಟೇಬಲ್ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳಿಗೆ ಪ್ರಾಚಾರ್ಯ ಹಾಗೂ ಉಪನ್ಯಾಸಕರನ್ನು ಮುಖ್ಯ ಅಧೀಕ್ಷಕರಾಗಿ ನೇಮಿಸಲಾಗಿದೆ. ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಜೂನ್‌ 10ರಂದು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ವರದಿ ಮಾಡಿಕೊಳ್ಳಬೇಕು. ಪರೀಕ್ಷೆಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಬೇಕು. ನಕಲು ಜರುಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಡಿ., ಜವಾಹರ ನಗರ ಪ.ಪೂ. ಕಾಲೇಜಿನ ಪ್ರಾಚಾರ್ಯ ಪ್ರಕಾಶ ಕುಲಕರ್ಣಿ, ಸಿಂಧನೂರಿನ ತಹಶೀಲ್ದಾರ್‌ ಶಿವಾನಂದ ಸಾಗರ, ಮಾನ್ವಿ ಬಿಇಒ ವೆಂಕಟೇಶ ಗುಡಿಹಾಳ, ಲಿಂಗಸುಗೂರಿನ ತಹಶೀಲ್ದಾರ್‌ ಚಂದ್ರಕಾಂತ ಎಲ್.ಡಿ. ಸೇರಿ ವಿವಿಧ ಕಾಲೇಜಿನ ಪ್ರಾಚಾರ್ಯರು, ಪರೀಕ್ಷಾ ಕೇಂದ್ರಗಳ ಅಧಿಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ವಿತರಕರು ಸೇರಿ ಇತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next