Advertisement

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಆದ್ಯತೆ

06:16 PM Dec 25, 2019 | Naveen |

ರಾಯಚೂರು: ರಾಜ್ಯ ಸರಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಶಿಕ್ಷಣ, ಉದ್ಯೋಗ ಹಾಗೂ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಬದ್ದವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.

Advertisement

ನಗರದ ಹೊರವಲಯದಲ್ಲಿರುವ ಚಂದ್ರಬಂಡಾ ಗ್ರಾಮದಲ್ಲಿ ಮಂಗಳವಾರ ನಡೆದ ಘನತ್ಯಾಜ್ಯ ವಿಲೇವಾರಿ ಘಟಕದ ಶಂಕುಸ್ಥಾಪನೆ ಮತ್ತು ಚಂದ್ರಬಂಡಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಲಾ ಮಕ್ಕಳಿಗೆ ಲಸಿಕೆ ಮತ್ತು ರಾಷ್ಟ್ರೀಯ ಭದ್ರತೆ ಯೋಜನೆಯಡಿ ವಿವಿಧ ಫಲಾನುಭವಿಗಳಿಗೆ ಪಿಂಚಣಿ ಕಾರ್ಡ್‌ ವಿತರಣೆ ಹಾಗೂ ಎಸ್‌ಎಸ್‌ ಎಲ್‌ಸಿ ವಿದ್ಯಾರ್ಥಿಗಳ ಘಟಕ ಪರೀಕ್ಷೆ ಪತ್ರಿಕೆ ಬಿಡುಗಡೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಭಾಗದಲ್ಲಿ ಬಡತನ ಹೆಚ್ಚಾಗಿದೆ. ಬಡತನ ನಿರ್ಮೂಲನೆಗೆ ಸರಕಾರದಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡಿ ಸಾಧನೆ ಮಾಡಬೇಕು. ಗುರು-ಹಿರಿಯರನ್ನು, ಪಾಲಕರನ್ನು ಗೌರವಿಸಬೇಕು. ಉತ್ತಮ ಸಂಸ್ಕೃತಿ, ಸಂಸ್ಕಾರ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ತಾವು ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.

ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್‌ ಮಾತನಾಡಿ, ಈ ಭಾಗದಲ್ಲಿ ನೀರಿನ ಸಮಸ್ಯೆಯಿದ್ದು, ಕೆರೆಗಳನ್ನು ತುಂಬುವ ಕಾರ್ಯ ನಡೆಯಬೇಕಾಗಿದೆ. ಚಂದ್ರಬಂಡಾ, ಕಟ್ಲೆಟೂರು ಕೆರೆಗೆ 9 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು. ಇದರಿಂದ ಈ ಭಾಗದ ರೈತರಿಗೆ ಅನುಕೂಲವಾಗುತ್ತದೆ. ಈ ಭಾಗ ತೆಲಂಗಾಣ ರಾಜ್ಯದ ಗಡಿ ಭಾಗದಲ್ಲಿದೆ. ತೆಲಂಗಾಣದಲ್ಲಿ ಕೃಷಿಕರು ಉತ್ತಮವಾಗಿ ಬೆಳೆ ಬೆಳೆಯುತ್ತಾರೆ. ಆದರೆ ನಮ್ಮ ಈ ಭಾಗದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಿಸಬೇಕಾಗಿದೆ ಎಂದರು.

ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಪಂ ಸದಸ್ಯ ಕೇಶವರೆಡ್ಡಿ, ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ದುರುಗೇಶ, ತಾಪಂ ಅಧ್ಯಕ್ಷೆ ಜಯಮ್ಮ, ಎನ್‌. ಶಂಕ್ರೆಪ್ಪ, ಅಚ್ಯುತರೆಡ್ಡಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಅ ಧಿಕಾರಿ, ಸಿಬ್ಬಂದಿ, ಚಂದ್ರಬಂಡಾ ಪ್ರೌಢಶಾಲೆ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next