Advertisement

ಸ್ತ್ರೀ ಯರ ಸಬಲೀಕರಣಕ್ಕೆ ಮಹಿಳಾ ಅಭಿವೃದ್ಧಿ ನಿಗಮ ಆದ್ಯತೆ

11:47 AM Jan 20, 2020 | Naveen |

ರಾಯಚೂರು: ಮಹಿಳಾ ಸಬಲೀಕರಣಕ್ಕೆ ಸರ್ಕಾರ ನಾನಾ ಯೋಜನೆಗಳನ್ನೂ ಜಾರಿಗೊಳಿಸಿದೆ. ಅವುಗಳನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳೆ ತಿಳಿಸಿದರು.

Advertisement

ನಗರದ ಜೆಸಿ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ದೇವದಾಸಿ ಪುನರ್ವಸತಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ನಿಗಮ ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಒತ್ತು ನೀಡುತ್ತಿದ್ದು, ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. 1989ರಲ್ಲಿ ಸ್ಥಾಪನೆಯಾದ ಈ ನಿಗಮ ಮಹಿಳೆಯರ ಶ್ರೇಶಯೋಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದೆ. ರಾಜ್ಯ ಸರ್ಕಾರ ಮೊದಲ ಬಾರಿಗೆ ಕಲ್ಯಾಣ ಕರ್ನಾಟಕ ಭಾಗದವರನ್ನು ನಿಗಮ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಭಾಗದ ಮಹಿಳೆಯರ ಕಲ್ಯಾಣಕ್ಕಾಗಿ ಒತ್ತು ನೀಡುವುದಾಗಿ ಭರವಸೆ ನೀಡಿದರು.

ಈ ಭಾಗದ ಮಹಿಳೆಯರು ಅನಕ್ಷರತೆಯಿಂದಾಗಿ ಸಾಕಷ್ಟು ಹಿಂದುಳಿದಿದ್ದಾರೆ. ಅಲ್ಲದೇ, ಆರೋಗ್ಯದ ದೃಷ್ಟಿಯಿಂದ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಆದರೆ, ಸರ್ಕಾರ ನೀಡುವ ಸೌಲಭ್ಯಗಳನ್ನೂ ಸರಿಯಾಗಿ ಬಳಸಿಕೊಂಡಲ್ಲಿ ಸಮಸ್ಯೆಗಳು ಇತ್ಯರ್ಥಗೊಳ್ಳಲಿವೆ ಎಂದರು.

ನಿಗಮದಿಂದ ಯಾವುದೇ ಸೌಲಭ್ಯ ಬೇಕಾದರೂ ಅರ್ಜಿ ಸಲ್ಲಿಸಬೇಕು. ಫಲಾನುಭವಿಗಳು ನೇರವಾಗಿ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆಯಬೇಕು ಎಂದರು.

Advertisement

ನಿಗಮದಿಂದ ಸಾಲ ಸೌಲಭ್ಯವನ್ನು ಕೇವಲ ಸಬ್ಸಿಡಿಗಾಗಿ ಆಸೆ ಪಡೆಯದೆ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಬೇಕು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲು ಒತ್ತು ನೀಡಲಾಗುವುದು. ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದರು.

ದೇವದಾಸಿ ಪುನರ್ವಸತಿ ಯೋಜನೆಯಡಿ ಮಹಿಳಾ ಸಂಘಟನೆಗಳಿಗೆ ಚೇತನಾ, ಧನಶ್ರೀ, ಲಿಂಗತ್ವ ಮತ್ತು ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಲ್ಲಿ ಹಲವು ಸೌಲಭ್ಯಗಳಿವೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಕರೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ ಮಾತನಾಡಿದರು. ದೇವದಾಸಿ ಪುನರ್ವಸತಿ ಯೋಜನೆ ಇಲಾಖೆ ಅಧಿಕಾರಿ ಗೋಪಾಲ ನಾಯಕ, ವಿವಿಧ ಸಂಘಟನೆಗಳ ಮುಖಂಡರಾದ ಎಚ್‌.ಪದ್ಮಾ, ಜ್ಯೋತಿ, ಈರಮ್ಮ, ಶ್ರೀದೇವಿ, ಶರಣಮ್ಮ, ಸೀತಮ್ಮ, ಶರಣಮ್ಮ ಕಾಮರೆಡ್ಡಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next