Advertisement

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

09:12 PM Sep 19, 2024 | Team Udayavani |

ಮಂಗಳೂರು: ಚೈಲ್ಡ್ ಹೆಲ್ಪ್ ಲೈನ್‍ಗೆ ಸಾರ್ವಜನಿಕರಿಂದ ಬಂದ ದೂರಿನನ್ವಯ ಗುರುವಾರ(ಸೆ19) ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮಂಗಳೂರಿನ ಬಂದರು (ದಕ್ಕೆ), ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ 2 ಬಾಲ ಕಾರ್ಮಿಕರು ಪತ್ತೆಯಾಗಿದ್ದಾರೆ. ಇವರನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ.

Advertisement

ಹಠಾತ್ ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಹೆಲ್ಪ್ ಲೈನ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. 15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಅಲ್ಲದ ಸಂಸ್ಥೆಯಲ್ಲಿ ದುಡಿಯುದನ್ನು ನಿಯಂತ್ರಿಸಲಾಗಿದ್ದು, ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.

ಕಾಯ್ದೆಯನ್ನು ಉಲ್ಲಂಘಿಸಿದ ಮಾಲಕರಿಗೆ ರೂ.50,000ರೂ. ವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್ ದಾಖಲಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next