Advertisement

ಎನ್‌ಸಿಬಿ ಅಧಿಕಾರಿಗಳ ದಾಳಿ: ಮೂವರು ಯುವತಿಯರು ವಶಕ್ಕೆ

12:12 PM Dec 02, 2022 | Team Udayavani |

ಬೆಂಗಳೂರು: ನಗರದ ಮಡಿವಾಳದಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡ್ರಗ್ಸ್‌ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಎನ್‌ಸಿಬಿ ಅಧಿಕಾರಿಗಳು ಮೂವರು ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.

Advertisement

ಉತ್ತರ ಭಾರತ ಮೂಲದ ಯುವತಿಯರು ಸಾಮಾಜಿಕ ಜಾಲತಾಣಗಳ ಮೂಲಕ ಡ್ರಗ್ಸ್‌ಗಳನ್ನು ಮನೆಗೆ ತರಿಸಿಕೊಂಡು ಸೇವಿಸುತ್ತಿದ್ದರು. ಈ ಮಾಹಿತಿ ಮೇರೆಗೆ ಗುರುವಾರ ಅಪಾರ್ಟ್‌ಮೆಂಟ್‌ ಮೇಲೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡಿರುವ ಯುವತಿಯರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೂಂದೆಡೆ ಡಾರ್ಕ್‌ವೆಬ್‌ ಮೂಲಕ ಕೂಡ ಡ್ರಗ್ಸ್‌ ತರಿಸಿಕೊಳ್ಳುತ್ತಿದ್ದರು ಎಂಬುದು ಗೊತ್ತಾಗಿದೆ. ತನಿಖೆ ನಡೆಯುತ್ತಿದೆ ಎಂದು ಎನ್‌ಸಿಬಿ ಅಧಿಕಾರಿಗಳು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next