ರಾಯಚೂರು: ಅಕ್ರಮ ಅಕ್ಕಿ ದಾಸ್ತಾನು ಮಾಡಿದ್ದ ಜಿಲ್ಲೆಯ ನಾಲ್ಕು ರೈಸ್ ಮಿಲ್ ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 6.61 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಸಹಾಯಕ ಆಯುಕ್ತ ಸಂತೋಷ ಎಸ್. ಕಾಮಗೌಡ ನೇತೃತ್ವದಲ್ಲಿ ಆಹಾರ ನಿರೀಕ್ಷರು ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.
ಮನ್ಸಲಾಪುರ ರಸ್ತೆಯಲ್ಲಿನ ಎರಡು ಗದ್ವಾಲ್ ರಸ್ತೆಯ ಚಂದ್ರಿಕಾ ರೈಸ್ ಮಿಲ್ ಹಾಗೂ ನರಸಿಂಹ ರೈಸ್ ಮಿಲ್ ಮೇಲೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ:ಜಾರಕಿಹೊಳಿ ರಾಜೀನಾಮೆ: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ
ನಾಲ್ಕು ಕಡೆ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿರುವುದು ಖಚಿತಗೊಂಡಿದ್ದು, 880 ಪ್ಯಾಕೆಟ್ ಅಕ್ಕಿ ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ: ಮೀಸಲಾತಿ ಪರಿಶೀಲನೆಗೆ ಸಮಿತಿ : ಬೀಸೋ ದೊಣ್ಣೆಯಿಂದ ತಪ್ಪಿಸಲು ಮಾರ್ಗ
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕ ಬಿ.ಆರ್. ಯಂಕಣ್ಣ ನೀಡಿದ ದೂರಿನ ಮೇರೆಗೆ ಗ್ರಾಮೀಣ ಠಾಣೆಯಲ್ಲಿ ನಾಲ್ಕು ರೈಸ್ ಮಿಲ್ ಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.