ವಿಜಯಪುರ: ಜಿಲ್ಲೆ ಪೊಲೀಸರು ಎಎಸ್ ಪಿ ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಅಕ್ರಮವಾಗಿ ಬಳುಸುತ್ತಿದ್ದ 3 ಮೊಬೈಲ್, ಸಿಗರೇಟ್, ತಂಬಾಕು ವಶಕ್ಕೆ ಪಡೆದಿದ್ದಾರೆ.
ಎಎಸ್ ಪಿ ರಾಮ ಅರಸಿದ್ಧಿ ನೇತೃತ್ವದಲ್ಲಿ ಡಿಎಸ್ ಪಿ, 7 ಸಿಪಿಐ, 60 ಪೊಲೀಸರೊಂದಿಗೆ ಗುರುವಾರ ಬೆಳಿಗ್ಗೆ ಜಿಲ್ಲಾ ಕೇಂದ್ರ ಕಾರಾಗೃಹದ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ್ದಾರೆ.
ಸತತ ಎರಡು ಗಂಟೆ ಪರಿಶೀಲನೆ ಬಳಿಕ ಜೈಲಿನಲ್ಲಿ ಅಕ್ರಮವಾಗಿ ಬಳಸುತ್ತಿದ್ದ ಮೂರು ಮೊಬೈಲ್, ಒಂದು ಬಳಕೆ ಇಲ್ಲದ ಸಿಮ್, ಸಿಗರೇಟ್, ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ.
ಸದರಿ ಪ್ರಕರಣದಲ್ಲಿ ಅಕ್ರಮವಾಗಿ ಮೊಬೈಲ್ ಹಾಗೂ ತಂಬಾಕು ಉತ್ಪನ್ನ ಬಳಕೆ ಮಾಡುತ್ತಿದ್ದವರ ವಿರುದ್ಧ ವಿಚಾರಣೆ ನಡೆಸುತ್ತಿರುವುದಾಗಿ ಎಸ್ ಪಿ ಅನುಪಮ ಅಗರವಾಲ್ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಮೋದಿ ಸೂಚನೆ? ಊಹಾಪೋಹಗಳಿಗೆ ತೆರೆ ಎಳೆದ ಸಚಿವ ಸುಧಾಕರ್
ಜೈಲುಗಳಲ್ಲಿ ಅಕ್ರಮವಾಗಿ ಮೊಬೈಲ್, ಸಿಗರೇಟ್, ತಂಬಾಕು ಉತ್ಪನ್ನ ಸಿಕ್ಕಿರುವ ಕುರಿತು ಜೈಲು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ನಮಗಿಲ್ಲ. ಈ ಬಗ್ಗೆ ಬಂಧಿಖಾನೆ ಇಲಾಖೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ಎಸ್ಪಿ ಅಗರವಾಲ್ ತಿಳಿಸಿದ್ದಾರೆ.