Advertisement

Bangalore: 440 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ

10:18 AM Mar 24, 2024 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಪಶ್ಚಿಮ ಮತ್ತು ಕೇಂದ್ರ ವಿಭಾಗದ ಪೊಲೀಸರು ಶನಿವಾರ  ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಮುಂಜಾನೆ 5 ಗಂಟೆಯಿಂದ ಬೆಳಗ್ಗೆ 9ರವರೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Advertisement

ಕೇಂದ್ರ ವಿಭಾಗದಲ್ಲಿ 113 ರೌಡಿಗಳು ಮತ್ತು ಪಶ್ಚಿಮ ವಿಭಾಗದಲ್ಲಿ 326 ರೌಡಿಗಳ ಮನೆ ಮೇಲೆ ದಾಳಿ ಮಾಡಿದ್ದು, ಈ ವೇಳೆ ಕೆಲ ರೌಡಿಗಳಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ಸಂದರ್ಭದಲ್ಲಿ ಕೆಲ ರೌಡಿಗಳು ಮನೆಗಳಲ್ಲಿ ಇರಲಿಲ್ಲ. ಮನೆಯಲ್ಲಿದ್ದ ರೌಡಿಗಳನ್ನು ಹೊರಗೆ ಕರೆದು ಪ್ರಸ್ತುತ ಮಾಡುತ್ತಿರುವ ಉದ್ಯೋಗ, ಬಳಸುತ್ತಿರುವ ಮೊಬೈಲ… ಸಂಖ್ಯೆ ಪಡೆದುಕೊಂಡು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿ ಅಹಿತಕರ ಘಟನೆ ಸೇರಿ ಅಕ್ರಮ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಲಾಗಿದೆ.

ಪಶ್ಚಿಮ ವಿಭಾಗದ ಉಪ್ಪಾರಪೇಟೆ, ಸಿಟಿ ಮಾರ್ಕೆಟ್‌, ಕಲಾಸಿಪಾಳ್ಯ, ಕಾಟನ್‌ಪೇಟೆ, ಚಾಮ ರಾಜಪೇಟೆ, ಬ್ಯಾಟರಾಯನಪುರ, ಚಂದ್ರಲೇಔಟ್‌, ಜೆ.ಜೆ.ನಗರ, ಆರ್‌.ಆರ್‌.ನಗರ, ಎ.ಪಿ.ನಗರ, ಬ್ಯಾಡರಹಳ್ಳಿ, ಜ್ಞಾನಭಾರತಿ, ಕೆಂಗೇರಿ, ವಿಜಯನಗರ, ಕಾಮಾಕ್ಷಿಪಾಳ್ಯ, ಕೆ.ಪಿ.ಅಗ್ರಹಾರ, ಗೋವಿಂದ ರಾಜನಗರ, ಬಸವೇಶ್ವರನಗರ ಮತ್ತು ಮಾಗಡಿ ರಸ್ತೆ ಪೊಲೀಸ್‌ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ. ಒಟ್ಟು 326 ರೌಡಿಗಳ ಮನೆಗಳ ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆಯ ವೇಳೆ 231 ರೌಡಿಗಳು ಸ್ಥಳದಲ್ಲಿ ಹಾಜರಿದ್ದರು. 95 ಮಂದಿ ರೌಡಿಗಳು ಸ್ಥಳದಲ್ಲಿ ಇರಲಿಲ್ಲ ಎಂದು ಡಿಸಿಪಿ ಗಿರೀಶ್‌ ಮಾಹಿತಿ ನೀಡಿದ್ದಾರೆ.

ಇನ್ನು ಕೇಂದ್ರ ವಿಭಾಗದ ಒಟ್ಟು 113 ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. 90 ಮಂದಿ ರೌಡಿಗಳು ಸ್ಥಳದಲ್ಲಿ ಹಾಜರಿದ್ದರು. 23 ಮಂದಿ ರೌಡಿಶೀಟರ್‌ಗಳು ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್‌ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next