ತುಮಕೂರು: ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗದಂತೆ ತಡೆಗಟ್ಟಲು ಶುಕ್ರವಾರ ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಅಪಾರ ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ.
ತುಮಕೂರಿನಲ್ಲಿ ಬಕ್ರೀದ್ ಹಬ್ಬ ಹಾಗೂ ಅಕ್ರಮ ಚಟುವಟಿಕೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ಮುಂಜಾನೆ ರೌಡಿಶೀಟರ್ ಮನೆಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.
ಇದನ್ನೂ ಓದಿ: ಬ್ಲೇಡ್ ನಿಂದ ಕತ್ತು, ಕೈ ಕೊಯ್ದುಕೊಂಡು ಠಾಣೆ ಎದುರು ಯುವಕನ ರಂಪಾಟ: ಬೆಚ್ಚಿ ಬಿದ್ದ ನಾಗರಿಕರು
ನಂತರ ನಗರದ ಚಿಲುಮೆ ಸಮುದಾಯ ಭವನದಲ್ಲಿ ಪರೇಡ್ ಮಾಡಲಾಯಿತು. ನಗರ ವ್ಯಾಪ್ತಿಯಲ್ಲಿನ 84 ಜನ ರೌಡಿಶೀಟರ್ ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದರು.