Advertisement

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

11:51 AM Apr 23, 2024 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಕೆಲ ರೌಡಿಶೀಟರ್‌ಗಳು ರೌಡಿ ಚಟುವಟಿಕೆಯಲ್ಲಿ ಭಾಗಿಯಾಗುವ ಶಂಕೆ ಮೇರೆಗೆ ಸೋಮವಾರ ಬೆಳ್ಳಗೆ ಪೂರ್ವ ವಿಭಾಗದ ಪೊಲೀಸರು 346 ರೌಡಿಗಳ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಮುಂಜಾನೆ 4.30ರಿಂದ ಬೆಳಗ್ಗೆ 9 ಗಂಟೆವರೆಗೆ ಎಲ್ಲಾ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಪ್ರಸ್ತುತ ಯಾವ ಉದ್ಯೋಗ ಮಾಡಲಾಗುತ್ತಿದೆ, ಮೊಬೈಲ್‌ ನಂಬರ್‌ ಸೇರಿ ಇತ್ಯಾದಿ ಮಾಹಿತಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಈ ವೇಳೆ ಕೆಲ ರೌಡಿಗಳ ಮೊಬೈಲ್‌ಗ‌ಳನ್ನು ವಶಕ್ಕೆ ಪಡೆಯ ಲಾಗಿದೆ. ದಾಳಿಯ ವೇಳೆ ಕೆಲ ರೌಡಿಗಳು ಮನೆ ಯಲ್ಲಿ ಇರಲಿಲ್ಲ. ಕರೆ ಮಾಡಿದ್ದಾಗ ಹೊರಗಡೆ ಇರುವುದಾಗಿ ತಿಳಿಸಿದ್ದಾರೆ. ಅಂತವರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸ ಲಾಗಿದೆ. ಮತದಾನ ದಿನದಂದ ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದು ಇದರ ಪೂರ್ವಭಾವಿ ಯಾಗಿ ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next