Advertisement

ಅಂಗಡಿಗಳ ಮೇಲೆ ದಾಳಿ; ದಂಡ ವಸೂಲಿ

05:04 PM Apr 24, 2022 | Team Udayavani |

ಹುಮನಾಬಾದ: ಪಟ್ಟಣದ ವಿವಿಧೆಡೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆ ಅಡಿ 72 ಅಂಗಡಿಗಳ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ 6050 ರೂ. ದಂಡ ವಸೂಲಿ ಮಾಡಿದ್ದಾರೆ.

Advertisement

ರಾಜ್ಯ ತಂಬಾಕು ನಿಯಂತ್ರಣ ವಿಭಾಗಿಯ ಸಂಯೋಜಕ ಮಹಾಂತೇಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ತಂಬಾಕು ನಿಂತ್ರಣ ಕಾಯ್ದೆ-2003ರ ಆದೇಶ ಉಲ್ಲಂಘಟನೆ ಮಾಡಿದ ಅಂಗಡಿಗಳಿಗೆ ದಂಡ ವಿಧಿಸುವ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು, 2003ರ ಕಾಯ್ದೆ ಪರಿಣಾಮಕಾರಿಯಾಗಿ ಜಿಲ್ಲೆಯಾದ್ಯಂತ ಜಾರಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡಗಳು ವಿವಿಧ ಸಾರ್ವಜನಿಕ ಪ್ರದೇಶದಲ್ಲಿನ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ದಂಡ ವಿಧಿಸುವ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೂಡ ಮಾಡಲಾಗುತ್ತಿದೆ ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next