Advertisement
ಯೋಜನೆಗೆ ಅಗತ್ಯ ಇರುವ ಹಣ ಸಂಗ್ರಹ, ರಾಜ್ಯ ಮತ್ತು ಕೇಂದ್ರದ ಪಾಲುದಾರಿಕೆ, ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ಇತರ ಸೌಲಭ್ಯ ಕಲ್ಪಿಸುವ ಕುರಿತಾದ ರೂಪುರೇಷೆಗಳನ್ನು ರೂಪಿಸುವ ಕಾರ್ಯಕ್ಕೆ ಒಪ್ಪಂದದ ಮೂಲಕ ಹಸಿರು ನಿಶಾನೆ ಸಿಕ್ಕಂತಾಗಿದೆ.
ಯೋಜನೆ ಪೂರ್ಣಗೊಳಿಸಲು ಅಗತ್ಯ ಬಿದ್ದರೆ ಸಾಲ ಪಡೆದುಕೊಳ್ಳಲಾಗುವುದು ಎಂದು ಹೇಳಿದರು.
Related Articles
ಪೂರ್ಣಗೊಳಿಸಲು ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸುವ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರ ಜಂಟಿ ಸಹಭಾಗಿತ್ವ ಮಾತ್ರವಲ್ಲದೆ, ಖಾಸಗಿ ಸಹಭಾಗಿತ್ವದಲ್ಲಿಯೂ ಕಾರ್ಯ ನಿರ್ವಹಿಸಲಾಗುವುದು. ಸಬ್‌ಅರ್ಬನ್ ರೈಲು ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಇದೇ ಮಾದರಿಯಲ್ಲಿ ಕಾಯಘ¤ಗೊಳೀಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
Advertisement
ಬೈಯ್ಯಪ್ಪನಹಳ್ಳಿಯಲ್ಲಿ ಹೊಸ ಕೋಚಿಂಗ್ ಟರ್ಮಿನಲ್ ನಿರ್ಮಾಣ ಯೋಜನೆಯನ್ನು 116 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಇನ್ನು 2-3 ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದರಿಂದ ಬೆಂಗಳೂರು ನಗರ, ಯಶವಂತಪುರ ಹಾಗೂ ದಂಡು ನಿಲ್ದಾಣದಲ್ಲಿರುವ ಸಂಚಾರದ ಒತ್ತಡ ಕಡಿಮೆಯಾಗಲಿದೆ. ವಿಶ್ವದಜೆರ್ಯ ಮಟ್ಟದಲ್ಲಿ ಟರ್ಮಿನಲ್ ತಲೆ ಎತ್ತಲಿದ್ದು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತಲೂ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದರು.
ರೈಲ್ವೆ ಮೂಲಭೂತ ಸೌಕರ್ಯ ಅಭಿವೃದ್ದಿ ಸೇರಿದಂತೆ ಒಟ್ಟಾರೆ ಕಾರ್ಯಗಳಿಗೆ 500 ಕೋಟಿ ರೂ.ಬೇಕಾಗಲಿದ್ದು, ಅದನ್ನು ಸಹ ಕೇಂದ್ರ ಸರ್ಕಾರ ನೀಡಲು ಬದ್ಧವಿದೆ ಎಂದು ಆಶ್ವಾಸನೆ ನೀಡಿದರು.
ಮಾರ್ಚ್ ಅಂತ್ಯದ ವೇಳೆಗೆ ಬೆಂ-ಮೈ ಜೋಡಿ ಮಾರ್ಗ ಪೂರ್ಣ: ಬೆಂಗಳೂರು-ಮೈಸೂರು ಜೋಡಿ ಮಾರ್ಗ ಮಾರ್ಚ್ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ಅಲ್ಲದೆ, ಹೈಸ್ಪೀಡ್ ರೈಲು ಓಡಾಟ ಸಂಬಂಧ ಜರ್ಮನಿ ಕಂಪನಿಯಿಂದಸಮೀಕ್ಷೆ ನಡೆಸಲು ಮುಂದಾಗಿದ್ದು, ಈ ಸಂಬಂಧ ಮಾತುಕತೆ ನಡೆಸಲಾಗಿದೆ. ರಾಜ್ಯಕ್ಕೆ ರೈಲ್ವೆ ಬಜೆಟ್‌ನಲ್ಲಿ 900 ಕೋಟಿ ರೂ. ಲಭ್ಯವಾಗುತ್ತಿತ್ತು. ಅದನ್ನು 2,700 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುವ ಕಾರಣ ಬೆಂಗಳೂರು ಸಿಟಿ-ವೈಟ್μàಲ್ಡ್ ನಡುವೆ ಡಬ್ಲಿಂಗ್ ಮಾಡಿದ್ದಲ್ಲಿ ಜನರಿಗೆ ಹೆಚ್ಚು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈಲ್ವೆ ಸಚಿವರು ಇದೇ ವೇಳೆ ಸಲಹೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಬ್‌ಅರ್ಬನ್ ರೈಲ್ವೆ ಯೋಜನೆಗಾಗಿ ರಾಜ್ಯದ ಪಾಲು ಶೇ.80ರಷ್ಟು ಮತ್ತು ಕೇಂದ್ರದ ಪಾಲು ಶೇ.20ರಷ್ಟು ಎಂಬುದಾಗಿ ಕರಡುಪ್ರತಿಯಲ್ಲಿ ನಿಗದಿ ಮಾಡಲಾಗಿದೆ. ಆದರೆ, ಭೂಮಿಯ ಬೆಲೆ
ದುಬಾರಿಯಾಗಿರುವ ಕಾರಣ ಮತ್ತು ಸರ್ಕಾರದ ಮೇಲೆ ಇತರ ಹೊರೆಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಪಾಲು ಶೇ.80ರಷ್ಟು ನೀಡಲು ಕಷ್ಟವಾಗಿದೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ ಶೇ.50ರಷ್ಟು ನೀಡುವಂತೆ ನಿಗದಿ ಮಾಡಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿನ ರೈಲ್ವೆ ಯೋಜನೆಗಳು ನಿಗದಿತ ಅವಧಿಯಲ್ಲಿ ಮುಗಿಯಲು ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿದ್ದು, ರಾಜ್ಯದ ಪಾಲಿನ ಮೊತ್ತವನ್ನು ನೀಡಲಾಗುವುದು. ರೈಲ್ವೆ ಯೋಜನೆಗಾಗಿ 100 ಕೋಟಿ ರೂ.ಬಜೆಟ್‌ನಲ್ಲಿ ಮೀಸಲಿಡಲಾಗಿದೆ ಎಂದರು. ಕೇಂದ್ರ ಸಚಿವ ಅನಂತ ಕುಮಾರ್,
ಡಿ.ವಿ.ಸದಾನಂದಗೌಡ, ಸಚಿವರಾದ ಕೆ.ಜೆ.ಜಾರ್ಜ್, ಆರ್.ವಿ.ದೇಶಪಾಂಡೆ, ಸಭಾಪತಿ ಡಿ.ಎಚ್. ಶಂಕರಮೂರ್ತಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ, ಸಂಸದರಾದ ಪಿ.ಸಿ.ಮೋಹನ್, ಡಿ.ಕೆ.ಸುರೇಶ್ ಇತರರು ಉಪಸ್ಥಿತರಿದ್ದರು.