ಬೀದರ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಗುರುವಾರ(ಫೆ.18) ರೈಲು ತಡೆ ಚಳುವಳಿ ನಡೆಸಲು ಮುಂದಾದ ರೈತರನ್ನು ಪೊಲೀಸರು ತಡೆದಿದ್ದಾರೆ
ಅಧ್ಯಕ್ಷ ಸಿದ್ರಾಮಪ್ಪ ಆಣದೂರ ನೇತೃತ್ವದಲ್ಲಿ ರೈಲು ತಡೆ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದರು. ಈ ವೇಳೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸರು ಮುಖ್ಯ ದ್ವಾರದಲ್ಲಿ ರೈತರನ್ನು ತಡೆದಿದ್ದಾರೆ.
ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?
ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು ಪೊಲೀಸರ ಜತೆ ಮಾತಿನ ವಾಗ್ವಾದ ನಡೆಸಿದರು. ಬಳಿಕ ರೈಲು ಇಂಜಿನ್ ಎದುರಿಗೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಯಿತು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕೂಡಲೇ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಅಗ್ರಹಿಸಿದರು. ನಂತರ ಪ್ರಧಾನಿಗೆ ಬರೆದ ಮನವಿ ಪತ್ರವನ್ನು ರೈಲ್ವೆ ಅಧಿಕಾರಿಗೆ ಸಲ್ಲಿಸಲಾಯಿತು.
ಓದಿ : ರೈತರ ಪ್ರತಿಭಟನೆಯನ್ನು ಪಶ್ಚಿಮ ಬಂಗಾಲಕ್ಕೆ ವಿಸ್ತರಿಸುತ್ತೇವೆ : ಟಿಕಾಯತ್