Advertisement

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

07:50 PM Nov 24, 2024 | Team Udayavani |

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು‌ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ .ಬಿ ಪಾಟೀಲ ರವಿವಾರ ತಿಳಿಸಿದ್ದಾರೆ.

Advertisement

ಈ ಬಗ್ಗೆ ಪ್ರಕಟಣೆ ಹೊರಡಿಸಿದ ಸಚಿವರು, ಈ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ. ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗುವುದು ಎಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ ಎಂದಿದ್ದಾರೆ.

ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿಯವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದು ಸಚಿವ ಎಂ.ಬಿ.ಪಾಟೀಲ್‌  ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next