Advertisement

ರೈಲ್ವೆ ಕೆಳ ಸೇತುವೆಗಳ ಕಾಮಗಾರಿ ಶೀಘ್ರ ಪೂರ್ಣ

02:56 PM Jan 03, 2021 | Team Udayavani |

ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸುವ ರೈಲ್ವೆಕೆಳಸೇತುವೆಯನ್ನು ಒಂದು ತಿಂಗಳೊಳಗೆಹಾಗೂ ಉಣಕಲ್‌ ರೈಲ್ವೆ ನಿಲ್ದಾಣ ಬಳಿನೂತನವಾಗಿ ನಿರ್ಮಾಣವಾಗಲಿರುವ ರೈಲ್ವೆಕೆಳಸೇತುವೆಯನ್ನು ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.

Advertisement

ಇಲ್ಲಿನ ದೇಶಪಾಂಡೆ ನಗರ ಶ್ರೀಕೃಷ್ಣ ಮಂದಿರಬಳಿ ನಿರ್ಮಾಣವಾಗುತ್ತಿರುವ ರೈಲ್ವೆ ಕೆಳಸೇತುವೆಹಾಗೂ ಉಣಕಲ್‌ ರೈಲ್ವೆ ನಿಲ್ದಾಣದ ಸಮೀಪನಿರ್ಮಿಸಲು ಉದ್ದೇಶಿಸಲಾಗಿರುವ ನೂತನಕೆಳಸೇತುವೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆಭೇಟಿ ನೀಡಿ ಪರಿಶೀಲನೆ ನಡೆಸಿ ನಂತರಸುದ್ದಿಗಾರರೊಂದಿಗೆ ಮಾತನಾಡಿದರು.

ಸ್ಥಳೀಯ ಸಂಸದರು ಆಗಿರುವ ಕೇಂದ್ರಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದಜೋಶಿ ಅವರ ಕಾಳಜಿ ಮತ್ತು ಸಹಕಾರದಿಂದ ದೇಶಪಾಂಡೆ ನಗರ ಹಾಗೂ ಭವಾನಿನಗರಮಧ್ಯೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆಯಕಾಮಗಾರಿಯನ್ನು 4.5 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇನ್ನು ಒಂದು ತಿಂಗಳ ಅವಧಿ ಯಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು.

ಈ ಹಿಂದೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ದಿ| ಸುರೇಶ ಅಂಗಡಿಯವರು ಈ ಭಾಗದ ರೈಲ್ವೆ ಸುಧಾರಣೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕುರಿತ ಬೇಡಿಕೆಗಳಿಗೆ ತ್ವರಿತವಾಗಿ ಸ್ಪಂದಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು. .ಉಣಕಲ್ಲ ರೈಲ್ವೆ ನಿಲ್ದಾಣವನ್ನು ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದ ಸಂಚಾರ ದಟ್ಟಣೆ ಕಡಿಮೆ ಮಾಡುವ ಅವಕಾಶಗಳಿವೆ. ಉಣಕಲ್ಲ ರೈಲ್ವೆ ನಿಲ್ದಾಣದ ಬಳಿ 6.5 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣ ಮಾಡಲಾಗುವುದು. ಇನ್ನು ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಸೇತುವೆಗಳ ನಿರ್ಮಾಣದಿಂದ ಅಶೋಕನಗರ ಮಾರ್ಗವಾಗಿ ಸುತ್ತುವರಿದು ಸಂಚರಿಸುವ ಸಮಸ್ಯೆ ಪರಿಹಾರವಾಗಲಿದೆ ಎಂದರು.

ಕೋವಿಡ್ ನಿಯಂತ್ರಣ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಮರ್ಥ ಮಾರ್ಗದರ್ಶನದಲ್ಲಿ ದೇಶದಲ್ಲಿ ಕಟ್ಟುನಿಟ್ಟಿನ ಕ್ರಮಗಳಿಂದ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಲಸಿಕೆ ವಿತರಣೆಯಲ್ಲೂ ಶಿಸ್ತಿನಿಂದ ಕಾರ್ಯ ನಿರ್ವಹಿಸಿ ಇತರೆ ದೇಶಗಳಿಗಿಂತ ಮುಂಚೂಣಿಯಲ್ಲಿರಲಿದ್ದೇವೆಂಬ ಭರವಸೆ ವ್ಯಕ್ತಪಡಿಸಿದರು.

Advertisement

ಹುಬ್ಬಳ್ಳಿಯಲ್ಲಿ ವಿವಿಧ ಉದ್ಯಮ ಸಂಸ್ಥೆಗಳ ಕೈಗಾರಿಕೆ ಸ್ಥಾಪನೆ ಕುರಿತು ಮಾತುಕತೆನಡೆದಿವೆ. ಈ ಭಾಗದ ಜನರಿಗೆ ಶೀಘ್ರ ಸಿಹಿ ಸುದ್ದಿ ಸಿಗಲಿದೆ. ಕೈಗಾರಿಕೆ ನಿವೇಶನಗಳ ಹಂಚಿಕೆಪಾರದರ್ಶಕವಾಗಿ ನಡೆದಿದೆ ಎಂದರು. ಮಾರ್ಜಕ ಮತ್ತು ಸಾಬೂನು ಮಂಡಳಿ ನಿರ್ದೇಶಕ ಮಲ್ಲಿಕಾರ್ಜುನ ಸಾವುಕಾರ, ಪಾಲಿಕೆಯ ಮಾಜಿ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ಉಮೇಶ ಕೌಜಗೇರಿ, ರೈಲ್ವೆ ಕಾಮಗಾರಿ ಗುತ್ತಿಗೆದಾರ ವಿಎಸ್‌ವಿ ಪ್ರಸಾದ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next