Advertisement
ರೈಲು ನಂಬರ್ 16575 ಯಶವಂತಪುರ -ಮಂಗಳೂರು ರೈಲುಗಾಡಿ ಸಿರಿಬಾಗಿಲು ರೈಲ್ವೇ ನಿಲ್ದಾಣದಲ್ಲಿ ನಿಲುಗಡೆಯಾಗಿದೆ. ರೈಲ್ವೇ ಪ್ರಯಾಣಿಕರಿಗೆ ರೈಲ್ವೇ ವತಿಯಿಂದ ಉಪಾಹಾರ ಹಾಗೂ ಚಹಾ, ಕಾಫಿ ವ್ಯವಸ್ಥೆ ಮಾಡಲಾಯಿತು. ಅಲ್ಲಿಂದ ಬೇರೆ ವ್ಯವಸ್ಥೆ ಮೂಲಕ ಪ್ರಯಾಣಿಸಲಿಚ್ಛಿಸುವ ಪ್ರಯಾಣಿಕರಿಗೆ ಪ್ರಯಾಣ ದರವನ್ನು ಹಿಂದಿರುಗಿಸುವ ವ್ಯವಸ್ಥೆ ಮಾಡಲಾಯಿತು.
ಎಡಕುಮೇರಿಯಲ್ಲಿ ರೈಲ್ವೇ ಹಳಿಗಳ ಮೇಲೆ ಸುಮಾರು 6 ಅಡಿ ಮಣ್ಣು ಕುಸಿದಿದ್ದು ಇದನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ. ನೈಋತ್ಯ ರೈಲ್ವೇಯ ಮೈಸೂರು ವಿಭಾಗದ ವಿಭಾಗೀಯ ಪ್ರಬಂಧಕ ಅತುಲ್ ಗುಪ್ತ ಅವರು ಸ್ಥಳದಲ್ಲಿದ್ದು ಕಾರ್ಯಾಚರಣೆ ಉಸ್ತುವಾರಿ ವಹಿಸಿದ್ದಾರೆ.