ಹುಬ್ಬಳ್ಳಿ: ರೇಲ್ವೇ ಇಲಾಖೆ 10 ದಿನದಲ್ಲಿ 80000 ಸಾವಿರ ಬೆಡ್‍ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೇಲ್ವೇ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೇ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಹೇಳಿದರು.
ಹುಬ್ಬಳ್ಳಿಯ ರೈಲ್ವೇ ವರ್ಕ್ ಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20000 ಸಾವಿರ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 5000 ಸಾವಿರ ಸ್ಲೀಪರ್ ಬೋಗಿಗಳನ್ನು ಐಸೋಲೇಷನ್ ಬೋಗಿಗಳನ್ನಾಗಿ ಪರಿವರ್ತಿಸಲಾಗಿದೆ. ಒಟ್ಟು 3,20,000 ಐಸೋಲೇಷನ್ ಬೆಡ್‍ಗಳನ್ನು ರೇಲ್ವೇ ಇಲಾಖೆಯಿಂದ ನಿರ್ಮಿಸುವ ಗುರಿ ಹೊಂದಲಾಗಿದೆ.
ಈಗ ನಿರ್ಮಿಸಿರುವ ಐಸೋಲೇಷನ್ ಬೋಗಿಗಳನ್ನು ಆರೋಗ್ಯ ಇಲಾಖೆ ಹಾಗೂ ಗೃಹ ಇಲಾಖೆ ನಿರ್ದೇಶನದ ಮೇರೆಗೆ, ಅಗತ್ಯ ಇರುವ ಕಡೆ ಸೇವೆಗಾಗಿ ಕಳುಹಿಸಿಕೊಡಲಾಗುವುದು. ಕೋವಿಡ್-19 ಪಾಸಿಟಿವ್ ಬಂದ ವ್ಯಕ್ತಿಗಳನ್ನು ಐಸೋಲೇಷನ್ ಬೋಗಿಗಳಲ್ಲಿ ಇರಿಸಿ ಚಿಕಿತ್ಸೆ ನೀಡಬಹುದಾಗಿದೆ.
ನೈರುತ್ಯ ರೇಲ್ವೇಯ ಹುಬ್ಬಳ್ಳಿ, ಮೈಸೂರು, ಬೆಂಗಳೂರು ವಿಭಾಗ ಹಾಗೂ ವರ್ಕ್ ಶಾಪ್‍ಗಳಲ್ಲಿ 312 ಐಸೋಲೇಷ್‍ಬೋಗಿಗಳನ್ನು ನಿರ್ಮಿಸಾಗಿದೆ. ಇಲಾಖೆಯು ಕೊವಿಡ್-19 ದಿಂದ ಉಂಟಾಗಬಹುದಾದ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ. ಸದ್ಯ ಎಲ್ಲಾ ಪ್ರಯಾಣಿಕರ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಅಗತ್ಯ ವಸ್ತುಗಳನ್ನು ಸರಬರಾಜು ಮಾಡವ ಸಲುವಾಗಿ ಸರುಕು ಸಾಗಾಣಿಕೆ ರೈಲುಗಳು ಸಂಚಾರ ನಡೆಸುತ್ತಿವೆ. ಇಲಾಖೆ ನೌಕರರು ಹಗಲಿರುಳು ಶ್ರಮಿಸಿ ಐಸೋಲೇಷನ್ ಕೋಚ್‍ಗಳನ್ನು ನಿರ್ಮಿಸಿದ್ದಾರೆ. ರೇಲ್ವೇ ಪೊಲೀಸ್ ವತಿಯಿಂದ ಪ್ರತಿ ವಿಭಾಗದಲ್ಲೂ ಊಟ ನೀಡುವ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಸ್ಥಿತಿಯನ್ನು ಅವಲೋಕಿಸಿ ಲಾಕ್ ಡೌನ್ ಕುರಿತು ನಿರ್ಧಾರ ಕೈಗೊಳ್ಳಲಿವೆ. ಐಸೋಲೇಷನ್ ಬೋಗಿಗಳನ್ನು ನಿರ್ಮಿಸುವಲ್ಲಿ ಶ್ರಮವಿಸಿದ ಎಲ್ಲಾ ರೈಲ್ವೆ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಹೇಳಿದರು.
ಕೋವಿಡ್-19 ಲಕ್ಷಣ ಕಾಣಿಸಿಕೊಳ್ಳವ ಪ್ರತಿಯೊಬ್ಬರು ಸ್ವಯಂಪ್ರೇರಿತರಾಗಿ ಬಂದು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಶಾಸಕ ಅವರವಿಂದ ಬೆಲ್ಲದ, ನೈರುತ್ಯ ರೈಲ್ವೆ ಮುಖ್ಯ ವ್ಯವಸ್ಥಾಪಕ ಅಜಯ್ ಕುಮಾರ್ ಸಿಂಗ್, ಹೆಚ್ಚುವರಿ ವ್ಯವಸ್ಥಾಪಕ ಪ್ರಶಾಂತ್ ಕುಮಾರ್ ಮಿಶ್ರಾ, ಹುಬ್ಬಳ್ಳಿ ಸಿ.ಡಬ್ಲೂ.ಮ್ ನೀರಜ್ ಜೈನ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.