ತುಮಕೂರು: ರೈಲ್ವೇ ಖಾತೆ ರಾಜ್ಯ ಸಚಿವರಾಗಿ ರಾಜ್ಯದಲ್ಲಿ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೈಲ್ವೇ ಕ್ರಾಂತಿ ಮಾಡಲು ಬದ್ಧವಾಗಿರುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.
ನಗರದ ರೈಲ್ವೇ ನಿಲ್ದಾಣದಲ್ಲಿ ಶುಕ್ರವಾರ ತುಮಕೂರು-ಯಶವಂತಪುರ ಹೊಸ ಮೆಮು ರೈಲಿಗೆ ಚಾಲನೆ ನೀಡಿ ಮಾತನಾಡಿ, ನನ್ನ ಅವಧಿ
ಯಲ್ಲಿ ರಾಜ್ಯದಲ್ಲಿ ನನೆಗುದಿಗೆ, ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸುವ ಮೂಲಕ ರೈಲ್ವೇ ಕ್ರಾಂತಿ ಮಾಡುವೆ. 2027ರ ಮಾರ್ಚ್ ಒಳಗೆ ರಾಯದುರ್ಗ-ತುಮಕೂರು, ದಾವಣಗೆರೆ- ತುಮಕೂರು ರೈಲ್ವೇ ಮಾರ್ಗಗಳ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ಬೆಂಗಳೂರಿಗೆ ಸಬ್‌ಅರ್ಬನ್ ರೈಲು ಸೇವೆ ಒದಗಿಸಲು ಈಗಾಗಲೇ ರೈಲ್ವೇ ಸಚಿವರೊಂದಿಗೆ ಚರ್ಚಿಸಿದ್ದು, 2025ರೊಳಗೆ 2 ಹಂತದ ಸಬ್‌ಅರ್ಬನ್ ರೈಲುಗಳನ್ನು ಲೋಕಾರ್ಪಣೆ ಮಾಡಲಾಗುವುದು. ತುಮಕೂರು-ಅರಸೀಕೆರೆ ಮಾರ್ಗದಲ್ಲಿ ಸ್ವಯಂಪ್ರೇರಿತ ಸಿಗ್ನಲ್ ಸಹ ಅಳವಡಿಸಲು ಹಾಗೂ ತುಮಕೂರು-ಬೆಂಗಳೂರು ಮಾರ್ಗದ 2 ಪಥದ ರೈಲ್ವೇ ಹಳಿಗಳನ್ನು 4 ಲೈನ್‌ಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಡಬಲ್ ಗೇಮ್ ಆಡುವುದು ಗೊತ್ತಿಲ್ಲ. ನನಗೂ ತುಂಬಾ ಶತ್ರುಗಳಿ¨ªಾರೆ, ನನ್ನ ಅನುಭವದ ಮೂಲಕ ನಿಭಾಯಿಸುತ್ತೇನೆ ಎಂದರು.