Advertisement

ಪ್ರಾದೇಶಿಕ ಭಾಷೆಯಾಗಿ ರೈಲ್ವೇ ಇಲಾಖೆಯಲ್ಲಿ ಕನ್ನಡ ಜಾರಿಗೆ ಅಗತ್ಯ ಕ್ರಮ: ಅಂಗಡಿ

10:15 AM Oct 30, 2019 | Team Udayavani |

ಬೆಳಗಾವಿ: ಪ್ರಾದೇಶಿಕ ಭಾಷೆಯಾಗಿ ರೈಲ್ವೆ ಇಲಾಖೆಯಲ್ಲಿ ಕರ್ನಾಟಕದಲ್ಲಿ ಕನ್ನಡ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

Advertisement

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಗಾಗಲೇ ರೈಲು ನಿಲ್ದಾಣದಲ್ಲಿ ಕನ್ನಡದಲ್ಲೇ ಮಾಹಿತಿ ನೀಡಲಾಗುತ್ತಿದೆ. ಕನ್ನಡದಲ್ಲೇ ಪತ್ರಿಕಾ ಹೇಳಿಕೆಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ. ಕನ್ನಡ ಭಾಷೆ ಬಲ್ಲ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಕನ್ನಡ ಬಳಕೆಗೆ ಇನ್ನಷ್ಟು ಒತ್ತು ನೀಡುತ್ತೇವೆ. ಕನ್ನಡದಲ್ಲಿ ವ್ಯವಹರಿಸಬಲ್ಲ ಸಿಬ್ಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.

ದೇಶದಲ್ಲಿರುವ ರೈಲು ನಿಲ್ದಾಣಗಳಿಗೆ ವಿದೇಶಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹಾಗಾಗಿ, ರಾಷ್ಟ್ರೀಯ ಭಾಷೆ ಹಿಂದಿ ಮತ್ತು ಇದಕ್ಕೆ ಪೂರಕವಾಗಿ ಇಂಗ್ಲಿಷ್ ಬಳಸಲಾಗುತ್ತಿದೆ. ಕರ್ನಾಟಕದ ಮಟ್ಟಿಗೆ, ಕನ್ನಡ ಬಳಕೆಗೆ ಆದ್ಯತೆ ನೀಡುವ ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

ಬಿಜೆಪಿಗೆ ಬೆಂಬಲಿಸುವ ರೀತಿಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿರುವ ಬಗ್ಗೆ ಪ್ರಸ್ತಾಪಿಸಿದ ಅವರು ರಾಜಕಾರಣದಲ್ಲಿ ಯಾರು ಶತ್ರುಗಳು ಅಲ್ಲ ಮಿತ್ರರೂ ಅಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next