ಮುಂಬೈ: ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.
ಜೈಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಾರಾಷ್ಟ್ರದ ಫಾಲ್ಗರ್ ಬಳಿ ಮುಂಜಾನೆ ಐದು ಗಂಟೆಯ ವೇಳೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜೈಪುರ-ಮುಂಬೈ ರೈಲಿನಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ರೈಲಿನಲ್ಲಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಸೇರಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ.
ಆರೋಪಿ, ಆರ್‌ಪಿಎಫ್ ಕಾನ್ಸ್‌ಟೇಬಲ್ ಚೇತನ್ ಸಿಂಗ್, ಬೆಳಿಗ್ಗೆ ಐದು ಗಂಟೆಯ ಸುಮಾರಿಗೆ ತನ್ನ ಸ್ವಯಂಚಾಲಿತ ಶಸ್ತ್ರಾಸ್ತ್ರದಿಂದ ಗುಂಡು ಹಾರಿಸಿದ್ದು, ಮತ್ತೊಬ್ಬ ಆರ್‌ಪಿಎಫ್ ಎಎಸ್ ಐ ಮತ್ತು ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನ ಮೂವರು ಪ್ರಯಾಣಿಕರಿಗೆ ಗುಂಡಿಕ್ಕಿದ್ದಾನೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಲ್ಘರ್ ನಿಲ್ದಾಣವನ್ನು ದಾಟಿದ ನಂತರ ಚಲಿಸುವ ಜೈಪುರ ಎಕ್ಸ್‌ಪ್ರೆಸ್ ರೈಲಿನೊಳಗೆ ಆರ್‌ಪಿಎಫ್ ಕಾನ್‌ಸ್ಟೆಬಲ್ ಗುಂಡು ಹಾರಿಸಿದರು ಮತ್ತು ನಾಲ್ವರನ್ನು ಗುಂಡಿಕ್ಕಿ ದಹಿಸರ್ ನಿಲ್ದಾಣದ ಬಳಿ ರೈಲಿನಿಂದ ಜಿಗಿದಿದ್ದಾನೆ ಎನ್ನಲಾಗಿದ್ದು ಮುಂಬೈ ರೈಲ್ವೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ಆತನ ಬಳಿಯಿದ್ದ ಬಂದೂಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ ವೇಣೋಗೋಪಾಲ್ ನಿಧನ